ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಹೋಗಲು ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ : ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ಜಾಲಪಾತಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಜಪಾತದ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಜಲಾಪತದ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ ಜಲಪಾತಕ್ಕೆ ಸಾರ್ವಜನಿಕರು ಭೇಟಿ ನೀಡುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ.
ಗೋಕಾಕ ಜಲಪಾತ ಸೇರಿದಂತೆ ಜಿಲ್ಲೆಯ ಕೆಲವು ಪ್ರಸಿದ್ಧ ಜಲಪಾತವನ್ನು ಪ್ರವಾಸಿಗರು ದೂರದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಜಲಪಾತದ ಬಳಿ ನಿಗಾ ವಹಿಸಲು ಅರಣ್ಯ ಇಲಾಖೆಯ ಸಿಬ್ಬಂದಿ, ಪ್ರವಾಸಿಮಿತ್ರರು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ.
ಜಲಪಾತದ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಕೂಡ ಅಪಾಯಕಾರಿ ಸ್ಥಳಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement