ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ.
ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆ ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಮಣ್ಣು ಪರೀಕ್ಷೆ ಮತ್ತು ಗುಣಮಟ್ಟದ ಮಾಹಿತಿ ನೀಡಲಾಗುತ್ತದೆ. ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡಲಾಗುತ್ತದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸಲಿದೆ.

ಆಹಾರ ಪಾರ್ಕ್‌ಗಳ ಸ್ಥಾಪನೆ
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುತ್ತದೆ. ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಉಪಗ್ರಹ ಚಿತ್ರ, ಸೆನ್ಸಾರುಗಳ ಬಳಕೆ ಮೂಲಕ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆ ಉತ್ಪಾದಕತೆಗೆ ಮುನ್ಸೂಚನೆ ನೀಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುತ್ತದೆ. ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ತರಬೇತಿ, ಮಾರ್ಗದರ್ಶನ ಹಾಗೂ ಬೆಂಬಲ ನೀಡುವ ಅಗ್ರಿ ಅಕ್ಸಲೇಟರ್‌ ಪ್ಲಾಟ್‌ಫಾರ್ಮ್‌ (Agri Accelerator Platform) ಮೂಲಕ ಕೃಷಿ ವಲಯದ ಸ್ಟಾರ್ಟ್‌ ಅಪ್‌ (Start-up)ಗಳನ್ನು ಉತ್ತೇಜಿಸಲಾಗುತ್ತದೆ.

ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವ ಪ್ರಸ್ತಾಪ
ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಪಾರ್ಕ್‌, ಕೃಷಿ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್‌ ಗಳ ಸ್ಥಾಪನೆ.
ರಾಜ್ಯದ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತು ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ
ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತು ಹೆಚ್ಚಿಸಲು ಕೊಯ್ಲೋತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ರಾಜ್ಯದಲ್ಲಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷನಾ ಚಟುವಟಿಕೆಗಳಿಗೆ ಕ್ರಮ.
ಸಾಂಬಾರು ಪದಾರ್ಥ ಬೆಳೆ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್‌ (Spice Park) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ
ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ.
ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗೆ ಕ್ರಮ.

ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನ ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂ.
ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 10 ರೂ.ಗಳಿಂದ 30 ರೂ.ಗಳಿಗೆ ಹೆಚ್ಚಳ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 10,000 ಫಲಾನುಭವಿಗಳಿಗೆ ಸಹಾಯಧನ
ಅಮೃತ ಮಹಲ್/ ಹಳ್ಳಿಕಾರ್/ ಖಿಲಾರಿ ರಾಸುಗಳನ್ನು ಸಂವರ್ಧನೆ
ಹೈನುಗಾರಿಕೆ ಪ್ರೋತ್ಸಾಹಿಸಲು ರೈತ ಮಹಿಳೆಯರಿಗೆ ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್‌ಗಳನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು ಕ್ರಮ. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗಗೇರಿಸಲು 10 ಕೋಟಿ ರೂ.
ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳು ಹೊನ್ನಾವರ ತಾಲೂಕಿನ ಮಂಕಿ ಅಥವಾ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.
ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.
ಆಕ್ವಾ ಪಾರ್ಕ್‌ಗಳ ಸ್ಥಾಪನೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ.
ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ.
ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲಿನಲ್ಲಿ ಹೆಚ್ಚಳ. ಾದನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುತ್ತದೆ.
ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ವ್ಯವಸ್ಥೆ.
2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ 10,000 ವಸತಿರಹಿತ ಮೀನುಗಾರರಿಗೆ ಮನೆಗಳ ನಿರ್ಮಾಣಕ್ಕೆ ಸಹಾಯಧನ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement