ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಶ್ರೀನಗರ: ಭಾನುವಾರ (ಜೂನ್ 12) ಪುಲ್ವಾಮಾ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾಗೆ ಸಂಬಂಧಿಸಿದ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಶನಿವಾರ ರಾತ್ರಿ ಆರಂಭವಾದ ಕಾರ್ಯಾಚರಣೆಯು ಪುಲ್ವಾಮಾ ಜಿಲ್ಲೆಯ ದ್ರಾಬ್ಗಾಮ್ ಪ್ರದೇಶದಲ್ಲಿ ಸುಮಾರು 12 ಗಂಟೆಗಳ ನಂತರ ಕೊನೆಗೊಂಡಿತು.
ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಉಗ್ರರನ್ನು ಜುನೈದ್ ಶೀರ್ಗೋಜ್ರಿ, ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ ಮಲಿಕ್ ಎಂದು ಗುರುತಿಸಲಾಗಿದೆ.

ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್ ವಿಜಯಕುಮಾರ್ ಅವರು, “ಹತರಾದ ಮೂವರೂ ಸ್ಥಳೀಯರು, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದ್ದು, ಮೇ 13 ರಂದು ನಮ್ಮ ಸಹೋದ್ಯೋಗಿ ರಿಯಾಜ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.
ಎರಡು AK-47 ರೈಫಲ್‌ಗಳು ಮತ್ತು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement