ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೋಮವಾರ ತಡರಾತ್ರಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.
ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆ ಎದುರಾಗಿದೆ. ಇಳಿಯಸ್ಸಿನಲ್ಲೂ ದೊಡ್ಡಗೌಡರು ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಹಾಸನದ ಗಣೇಶ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ದೇವೇಗೌಡ ಭೇಟಿಯಾಗಿದ್ದರು.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement