ಶ್ರೀಲಂಕಾದಲ್ಲಿ ಬುರ್ಖಾ, ಮದರಸಾ ನಿಷೇಧ…!?

ಚಿತ್ರ ಕೃಪೆ-ಇಂಟರ್ನೆಟ್‌

ತನ್ನ ದೇಶದಲ್ಲಿ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸಲಾಗುವುದು ಹಾಗೂ ಸಾವಿರಕ್ಕೂ ಹೆಚ್ಚು ಇಸ್ಲಾಮಿಕ್ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರದ ಸಚಿವರೊಬ್ಬರ ಹೇಳಿಕೆ ಉಲ್ಲೇಖಿಸಿ ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕೆಲವು ಮುಸ್ಲಿಂ ಮಹಿಳೆಯರು ಧರಿಸುತ್ತಿದ್ದ ಬುರ್ಖಾವನ್ನು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ನಿಷೇಧಿಸಲು ಶುಕ್ರವಾರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸಾರ್ವಜನಿಕ ಭದ್ರತಾ ಸಚಿವ ಶರತ್ ವಿರಸೆಕೇರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ಆರಂಭದ ದಿನಗಳಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಹುಡುಗಿಯರು ಬುರ್ಖಾ ಧರಿಸಿಸುತ್ತಿರಲಿಲ್ಲ,ಆದರೆ ಇತ್ತೀಚಿಗೆ ಇದನ್ನು ಇದು ಧಾರ್ಮಿಕ ಉಗ್ರವಾದದ ಸಂಕೇತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಬುರ್ಖಾವನ್ನು ಬ್ಯಾನ್‌ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಾವಿರಕ್ಕೂ ಹೆಚ್ಚು ಮದರಸಾ ಇಸ್ಲಾಮಿಕ್ ಶಾಲೆಗಳನ್ನು ನಿಷೇಧಿಸಲು ಸರಕಾರ ಚಿಂತನೆ ನಡೆಸಿದ್ದು, ಈ ಮದರಾಸಗಳು ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿದೆ ಎಂದು ವೀರಶೇಖರ ಹೇಳಿದ್ದು, ಯಾರೋ ಒಂದು ಶಾಲೆಯನ್ನು ತೆರೆದು ಮಕ್ಕಳಿಗೆ ಏನು ಬೇಕಾದರೂ ಕಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಸ್ವಿಟ್ಜರ್‌ಲ್ಯಾಂಡಿನಲ್ಲಿ ಜನಮತ ಸಂಗ್ರಹಣೆಯಲ್ಲಿ ಬುರ್ಖಾ ನಿಷೇಧಕ್ಕೆ ಒಪ್ಪಿಗೆ ಸಿಕ್ಕಿತ್ತು. ಈಗ ಅದರ ಬೆನ್ನಲ್ಲೇ ಶ್ರೀಲಂಕಾದಲ್ಲಿ ಇಂಥದ್ದೇ ಸುದ್ದಿ ಹೊರಬಿದ್ದಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ದುಬೈನಲ್ಲಿ 1.5 ವರ್ಷಕ್ಕೆ ಬೀಳುವಷ್ಟು ಮಳೆ ಒಂದೇ ದಿನ ಸುರಿಯಿತು...! ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ, ವಿಮಾನಗಳ ಹಾರಾಟ ರದ್ದು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement