ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಶೀಘ್ರ ತನಿಖೆಗಾಗಿ ವಿಶೇಷ ಪ್ಯಾಸಿಕ್ಯೂಟರ್ ನೇಮಕ- ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಂತ್ರಸ್ತೆಯ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಅನುಶ್ರೀ ಡ್ರಗ್ಸ್ ಕೇಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವರು ಸುಮ್ಮನೆ ಯಾರನ್ನು ಅರೆಸ್ಟ್ ಮಾಡುವುದಿಲ್ಲ, ಡ್ರಗ್ಸ್ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎರಡು ವರ್ಷದಲ್ಲಿ ಪೊಲೀಸರು ಭಾರೀ ಡ್ರಗ್ಸ್ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ ಎಂದು ಹೇಳಿದರು.
ಮುಂದಿನ ಚುನಾವಣೆಗೆ ನಾಯಕರ ಸಮೂಹ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ಬದಲ್ಲಿ ನಡೆಯಲಿದೆ. ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಿ ಚುನಾವಣೆ ಎದುರಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement