ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC And PUC Exam) ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.
ಈ ಕುರಿತು ವಿಕಾಸಸೌಧದಲ್ಲಿ ಫೆಬ್ರವರಿ 20ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು‌‌ ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಏಪ್ರಿಲ್ ಕೊನೆಯ ವಾರದಲ್ಲಿ ನಡೆಸಲಾಗುವುದು ಎಂದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಐಡಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದರು. ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವೊಕೇಟ್ ಜನರಲ್ ಸಲಹೆ ಪಡೆದು ಹಿಜಾಬ್ ಕುರಿತು ನಿರ್ಧರಿಸಲಾಗುತ್ತದೆ ಎಂದರು.
2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಗೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ 1124 ಕೇಂದ್ರಗಳಲ್ಲಿ ನಡೆಯಲಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 ಮಾದರಿ ಅಂದರೆ 80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲಾಗಿದೆ ಎಂದು ತಿಳಿಸಿದರು.
2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌ 25ರಿಂದ ಏಪ್ರಿಲ್‌ 6ರ ವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 4,58,427 ಬಾಲಕರು ಹಾಗೂ4, 37,844 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 2747 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ದ್ವಿತೀಯ ಪಿಯುಸಿಯ ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ.
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ..
1-03-2024: ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
4-03-2024: ಗಣಿತ, ಶಿಕ್ಷಣ ಶಾಸ್ತ್ರ
5-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
6-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ಸ್‌
7-03-2024: ಇತಿಹಾಸ ಹಾಗೂ ಭೌತಶಾಸ್ತ್ರ
9-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ
11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ
13-03-2024: ಇಂಗ್ಲಿಷ್
15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
16-03-2024: ಅರ್ಥಶಾಸ್ತ್ರ ಪರೀಕ್ಷೆ
18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
21-03-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
22-03-2024: ಹಿಂದಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿಯ ಎಲ್ಲಾ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
25-03-2024: ಪ್ರಥಮ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)
27-03-2024: ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)
30-03-2024: ವಿಜ್ಞಾನ, ರಾಜ್ಯಶಾಸ್ತ್ರ
2-04-2024: ಗಣಿತ, ಸಮಾಜ ಶಾಸ್ತ್ರ
3-04-2024: ಅರ್ಥಶಾಸ್ತ್ರ
4-04-2024: ತೃತೀಯ ಭಾಷೆ ಪರೀಕ್ಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು)
6-04-2024: ದ್ವಿತೀಯ ಭಾಷೆ ಪರೀಕ್ಷೆ (ಇಂಗ್ಲಿಷ್‌, ಕನ್ನಡ)

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement