ರಮೇಶ ಜಾರಕಿಹೊಳಿ ಸಿಡಿ ಹಗರಣ: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಸತೀಶ ಗೈರು

ಬೆಂಗಳೂರು: ಸಹೋದರ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಹಗರಣದಿಂದ ಮುಜುಗರಕ್ಕೊಳಗಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಕಾಂಗ್ರೆಸ್ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದಾರೆ.
ಸಿಡಿ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಅವರು ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ್ ಜಾರಕಿಹೊಳಿ ಅವರನ್ನು ಉದ್ದೇಶ ಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು.
ಪ್ರಕರಣ ಬಯಲಿಗೆ ಬಂದ ಬಳಿಕ ಸತೀಶ್ ಜಾರಕಿಹೊಳಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ. ಗುರುವಾರ ಅವರು ಶಾಸಕಾಂಗ ಸಭೆಯಲ್ಲೂ ಭಾಗವಹಿಸದೇ ಇರುವುದು ಗಮನಾರ್ಹವಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

ನಿಮ್ಮ ಕಾಮೆಂಟ್ ಬರೆಯಿರಿ

advertisement