ಕರ್ನಾಟಕದಲ್ಲಿ ಶನಿವಾರ ಕೊರೊನಾದಿಂದ 349 ಸೋಂಕಿತರ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಶನಿವಾರ) 41, 664 ಮಂದಿಗೆ ಸೋಂಕು ತಗುಲಿದ್ದು, 349 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 2172931 ಕ್ಕೆ ಏರಿಕೆಯಾಗಿದೆ.
ಶನಿವಾರ ಆಸ್ಪತ್ರೆಯಿಂದ 34,425 ಮಂದಿ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಒಟ್ಟು 1544982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು 6.95.494 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪ್ರಕರಣಗಳ ಸಂಖ್ಯೆ ದರ 35.20 ರಷ್ಟಿದರೆ, ಮೃತರ ಪ್ರಮಾಣ ಶೇ. 0.83 ರಷ್ಚಿದೆ.
ಬೆಂಗಳೂರು ನಗರದಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗಿದ್ದು ಶನಿವಾರ 94 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 9340 ಕ್ಕೆ ಹೆಚ್ಚಳವಾಗಿದೆ. ನಗರದಲ್ಲಿ 13402 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1042714ಕ್ಕೆ ಏರಿಕೆಯಾಗಿದೆ.

ಜಿಲ್ಲೆಗಳಲ್ಲಿ ಶನಿವಾರ ದಾಖಲಾಗಿರುವ ಪ್ರಕರಣಗಳು:
ಬಾಗಲಕೋಟೆ 584, ಬಳ್ಳಾರಿ 1622, ಬೆಳಗಾವಿ 1502 ಬೆಂಗಳೂರು ಗ್ರಾಮಾಂತರ 1265, ಬೆಂಗಳೂರು ನಗರ 13,402,ಬೀದರ್ 185, ಚಾಮರಾಜನಗರ 535, ಚಿಕ್ಕಬಳ್ಳಾಪುರ 595, ಚಿಕ್ಕಮಗಳೂರು 1035, ಚಿತ್ರದುರ್ಗ 454, ದಕ್ಷಿಣ ಕನ್ನಡ 1787, ದಾವಣಗೆರೆ 292, ಧಾರವಾಡ 901, ಗದಗ ,459, ಹಾಸನ 2443, ಹಾವೇರಿ 267, ಕಲಬುರಗಿ 832, ಕೊಡಗು 483, ಕೋಲಾರ 778, ಕೊಪ್ಪಳ 630, ಮಂಡ್ಯ 1188, ಮೈಸೂರು 2489, ರಾಯಚೂರು 467, ರಾಮನಗರ 524, ಶಿವಮೊಗ್ಗ 1,081, ತುಮಕೂರು 2302, ಉಡುಪಿ 1146, ಉತ್ತರ ಕನ್ನಡ 1226 ವಿಜಯಪುರ 789 ಮತ್ತು ಯಾದಗಿರಿಯಲ್ಲಿ 343 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ಜಿಲ್ಲಾವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ  ಕೊಡಲಾಗಿದೆ.

15-05-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement