ಶಿರಸಿ : ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ; ಓರ್ವನನ್ನು ವಶಕ್ಕೆ ಪಡೆದ ಎನ್‌ಐಎ

ಶಿರಸಿ: ಆನ್‌ಲೈನ್‌ನಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಿರಸಿ ತಾಲೂಕಿನ ದಾಸನಕೊಪ್ಪ ಮೂಲದ ವ್ಯಕ್ತಿಯನ್ನು ಎನ್‌ಐಎ ಅಧಿಕಾರಿಗಳ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದೆ ಎಂದು ವರದಿಯಾಗಿದೆ.
ಬಕ್ರೀದ್‌ ಹಬ್ಬಕ್ಕಾಗಿ ದುಬೈನಿಂದ ಆಗಮಿಸಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಬನವಾಸಿಯ ದಾಸನಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ (32) ಎಂಬಾತನನ್ನು ವಶಕ್ಕೆ ಪಡೆದು ಕರೆದೊಯ್ದ ಮಾಹಿತಿ ಲಭ್ಯವಾಗಿದೆ.

ಮಂಗಳವಾರ ಬೆಳ್ಳಂಬೆಳಿಗ್ಗೆ ಎನ್‌ಐಎ ತಂಡ ಹಾಗೂ   ಬನವಾಸಿ ಪೊಲೀಸರ ಸಹಕಾರದಿಂದ ದಾಳಿ ಮಾಡಿ ಈತನನ್ನು ವಶಕ್ಕೆ ಪಡೆದಿದ್ದಾರೆ. ಪಾಸ್ ಪೋರ್ಟ ನಲ್ಲಿ ನಕಲಿ ದಾಖಲೆ ನೀಡಿರುವ ಆರೋಪವೂ ಇರುವ ಈತನ ಮೇಲಿದೆ ಎಂದು ಹೇಳಲಾಗಿದೆ.
ಇದಲ್ಲದೇ ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ ಹೊಂದಿರುವ ಅಬ್ದುಲ್ ಶುಕ್ಕೂರ್ ದುಬೈ ನಲ್ಲಿ ಕೆಲಸ ಮಾಡುತ್ತಿದ್ದು ಈತ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಎಂಬ ಆರೋಪವೂ ಇದೆ. ಗುಪ್ತ ಸ್ಥಳದಲ್ಲಿ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement