ಬೆಂಗಳೂರು : ಆಹಾರ ಧಾನ್ಯಗಳು, ತರಕಾರಿಗಳು, ಹಾಲು ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ನಂತರ ಹೋಟೆಲ್ ಮಾಲೀಕರು ಆಗಸ್ಟ್ 1 ರಿಂದ ರೆಸ್ಟೋರೆಂಟ್ ಮತ್ತು ಹೊಟೇಲ್ಗಳ ತಿನಿಸುಗಳಲ್ಲಿನ ಬೆಲೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದಾರೆ.
ಹೊಟೇಲ್ಗಳ ತಿಂಡಿ-ತಿನಿಸುಗಳ ಬೆಲೆಯನ್ನು 10%ರಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘ (ಬಿಬಿಎಚ್ಎ) ಸಭೆಯಲ್ಲಿ ಈ ವಿಷಯವನ್ನು ನಿರ್ಧರಿಸಲಾಗಿದೆ.
ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘ (ಬಿಬಿಎಚ್ಎ)ದ ಅಧ್ಯಕ್ಷ ಪಿ.ಸಿ.ರಾವ್ ಮಾತನಾಡಿ, ‘ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಹೋಟೆಲ್ಗಳಲ್ಲಿ ತಿನಿಸುಗಳ ಬೆಲೆಯಲ್ಲಿ ಕನಿಷ್ಠ ಶೇ.10ರಷ್ಟು ಏರಿಕೆ ಮಾಡುವ ಬಗ್ಗೆ ಹೊಟೇಲ್ ಉದ್ಯಮಿಗಳ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇದು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಈಗಾಗಲೇ ದರ ಹೆಚ್ಚಳವಾಗಿರುವ ಹೋಟೆಲ್ಗಳಿಗೆ ಇದು ಅನ್ವಯವಾಗುವುದಿಲ್ಲ. ಗ್ರಾಹಕರಿಗೂ ಹೊರೆಯಾಗದಂತೆ ಕೇವಲ 10 ರಷ್ಟು ಬೆಲೆ ಏರಿಕೆಗೆ ನಿರ್ಧಾರ ಮಾಡಲಿದ್ದೇವೆ ಎಂದು ಪಿ.ಸಿ. ರಾವ್ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ