ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ; ಜುಲೈ 16 ರಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ ೧೬)ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪದವಿಪೂರ್ವ ಕಾಲೇಜಿನ ವರೆಗೆ ಮಂಗಳವಾರ (ಜುಲೈ 16 ರಂದು) ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ (ಜುಲೈ 16)ದು ಜಿಲ್ಲೆಯ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ .
ಉತ್ತರ ಕನ್ನಡ ಜಿಲ್ಲಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ16ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರ,ಅಂಕೋಲಾ,ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ,ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಶಾಲಾ-ಕಾಲೇಜು, ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಕೊಡಗಿನಲ್ಲಿ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಮಂಗಳವಾರ (ಜುಲೈ 16) ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಕೊಡಗು ಜೆಲ್ಲೆಯಲ್ಲಿ ಪದವಿ ಕಾಲೇಜು ಸೇರಿ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೊಸನಗರ/ ಸಾಗರದಲ್ಲಿ ರಜೆ
ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 16 ರಂದು ಸಾಗರ ಹಾಗೂ ಹೊಸನಗರ ತಾಲೂಕಿನ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಾಗರ ತಹಶಳಿಲ್ದಾರ್ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದು, ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಅಂದಿನ ಪಾಠಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಬೇಕು ಎಂದು ಸೂಚಿಸಿದ್ದಾರೆ. ಶಿಕ್ಷಕರ ತರಬೇತಿ ಸಭೆಗಳು ಮುಂದುವರಿಯುತ್ತವೆ ಎಂದು ತಿಳಿಸಲಾಗಿದೆ.
ಹಾಸನ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರಜೆ
ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು ಈ ತಾಲೂಕುಗಳ ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಜುಲೈ 20 ರಂದು ಸರಿದೂಗಿಸುವಂತೆ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement