ಇಂದಿನಿಂದ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 40 ಪೈಸೆ ಇಳಿಕೆಯಾಗಿದೆ. ಹೊಸ ಬೆಲೆಗಳು ಮಂಗಳವಾರ (ನವೆಂಬರ್ 1) ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 89.62 ರೂ. ಇತ್ತು. ವಾಣಿಜ್ಯ ನಗರಿ ಮುಂಬೈನಲ್ಲಿ 106.31 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್​ಗೆ 101.94 ರೂ. ಮತ್ತು ಡೀಸೆಲ್​ ಪ್ರತಿ ಲೀಟರಿಗೆ 87.89 ರೂ. ಇತ್ತು.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 106.03 ರೂ. ಇದ್ದರೆ, ಡೀಸೆಲ್ ಲೀಟರ್‌ಗೆ 92.76 ರೂ., ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಇದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ.ನಂತೆ ಮಾರಾಟವಾಗುತ್ತಿತ್ತು. ಹೈದರಾಬಾದ್​​ನಲ್ಲಿ ಪೆಟ್ರೋಲ್ ಪ್ರತಿ ಲೀಟರ್​ಗೆ 109.66 ರೂ. ಇದ್ದರೆ, ಡೀಸೆಲ್ ಲೀಟರ್​ಗೆ 97.82 ರೂ. ಇತ್ತು.
ಬೆಂಚ್ಮಾರ್ಕ್ ಬ್ರೆಂಟ್ ಬೆಲೆ ಸೋಮವಾರ ಸಂಜೆ ಪ್ರತಿ ಬ್ಯಾರೆಲ್ ಮಾರ್ಕ್ USD 92 ರ ಆಸುಪಾಸಿನಲ್ಲಿದೆ. ಈ ವರ್ಷದ ಆರಂಭದಲ್ಲಿ, ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಮಾರ್ಚ್‌ನಲ್ಲಿ ಪ್ರತಿ ಬ್ಯಾರೆಲ್‌ಗೆ $ 139 ಅನ್ನು ತಲುಪಿದವು. ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ 2008ರ ನಂತರ ಇದು ಅತ್ಯಧಿಕ ಏರಿಕೆಯಾಗಿತ್ತು.
ಆರು ತಿಂಗಳಿಗೂ ಹೆಚ್ಚು ಕಾಲ ಸ್ಥಿರವಾಗಿ ಹಿಡಿದ ನಂತರ ಇಂಧನ ಬೆಲೆಯಲ್ಲಿ ಇಳಿಕೆಯಾಗಿದೆ. ಈ ವರ್ಷದ ಏಪ್ರಿಲ್ 7 ರಂದು ಕೊನೆಯ ಬಾರಿಗೆ ಬೆಲೆ ಇಳಿಕೆಯಾಗಿತ್ತು.

ಪ್ರಮುಖ ಸುದ್ದಿ :-   ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement