ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಅಧಿಕ, ಹಿಮಾಚಲಸೇರಿ ನಾಲ್ಕು ರಾಜ್ಯಗಳಲ್ಲಿ ಶೇ.100 ಜನರಿಗೆ ಮೊದಲ ಡೋಸ್‌

ಬೆಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೂ ಅಧಿಕವಾಗಿದೆ ಎಂದು ಹೇಳಿರುವ ಕೇಂದ್ರ ಆರೋಗ್ಯ ಸಚಿವಾಲಯ, ಕರ್ನಾಟಕ ,ಮಹಾರಾಷ್ಟ್ರ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹತ್ತು ಸಾವಿರದಿಂದ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ಆತಂಕ ವ್ಯಕ್ತಪಡಿಸಿದೆ
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇನ್ನುಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹತ್ತು ಸಾವಿರಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಜೂನ್ ತಿಂಗಳಲ್ಲಿ ದೇಶದ 279 ಜಿಲ್ಲೆಗಳಲ್ಲಿ ಪ್ರತಿನಿತ್ಯ 100 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದವು. ಈಗ 42 ಜಿಲ್ಲೆಗಳಿಗೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.
ಶೇ.16 ರಷ್ಟು ಜನರು ಪೂರ್ಣ ಲಸಿಕೆ:
ದೇಶದಲ್ಲಿ ಶೇಕಡಾ ಹದಿನಾರರಷ್ಟು ವಯಸ್ಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಶೇಕಡ 54 ರಷ್ಡು ಜನ ಮೊದಲ ಡೋಸ್ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಸಿಕ್ಕಿಂ, ದಾದ್ರಾ, ನಗರ ಹವೇಲಿ, ಹಿಮಾಚಲ ಪ್ರದೇಶದಲ್ಲಿ ಶೇಕಡ ನೂರರಷ್ಟು ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದವರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಭಾರತದಲ್ಲಿ ಅದರಲ್ಲೂ ಕೇರಳ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಅತಿಹೆಚ್ಚಿನ ಪ್ರಮಾಣದಲ್ಲಿ ನಿತ್ಯ ದಾಖಲಾಗುತ್ತದೆ ಇದು ಸಹಜವಾಗಿಯೇ ಕೇಂದ್ರ ಮತ್ತು ಕೇರಳ ಸರ್ಕಾರವನ್ನು ಆತಂಕಕ್ಕೆ ಸಿಲುಕುವಂತೆ ಮಾಡಿದೆ ಎಂದು ಅವರು ಹೇಳಿದರು

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement