‘ಜನ ಸುನವಾಯಿ’ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ; ಆರೋಪಿ ಬಂಧನ

ನವದೆಹಲಿ : ಇಂದು, ಬುಧವಾರ ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ನಡೆದ ಸಾರ್ವಜನಿಕ ಅಹವಾಲು ಆಲಿಕೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಯಿತು. 40 ರ ಹರೆಯದ ವ್ಯಕ್ತಿಯೊಬ್ಬರು ‘ಜನಸುನವಾಯಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಕುಂದುಕೊರತೆ ಹೇಳಿಕೊಳ್ಳುವವನ ವೇಷದಲ್ಲಿ ಬಂದಿದ್ದ ದಾಳಿಕೋರನನ್ನು ಮುಖ್ಯಮಂತ್ರಿಯವರ ಭದ್ರತಾ ಸಿಬ್ಬಂದಿ ತಕ್ಷಣ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೆಹಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಅವರ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಯನ್ನು 41 ವರ್ಷ ವಯಸ್ಸಿನ ರಾಜೇಶಭಾಯಿ ಖಿಮ್ಜಿ ಭಾಯಿ ಸಕಾರಿಯಾ ಎಂದು ಗುರುತಿಸಲಾಗಿದ್ದು, ಈತ ರಾಜಕೋಟ್ ನಿವಾಸಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಈತನ ಸಂಬಂಧಿಕರೊಬ್ಬ ಜೈಲಿನಲ್ಲಿದ್ದಾನೆ ಮತ್ತು ಈತನನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದ ಅರ್ಜಿಯೊಂದಿಗೆ ಬಂದಿದ್ದ, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇದೆ ಎನ್ನಲಾಗಿದೆ. ದೆಹಲಿ ಪೊಲೀಸರಿಂದ ಅಧಿಕೃತ ಪ್ರತಿಕ್ರಿಯೆಗಾಗಿ ಕಾಯಲಾಗುತ್ತಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು, ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರತಿ ವಾರ ತಮ್ಮ ನಿವಾಸದಲ್ಲಿ ನಡೆಸುವ ‘ಜನಸುನವಾಯಿ’ ಸಭೆಯಲ್ಲಿ ಭಾಗವಹಿಸುತ್ತಾರೆ. ಹಿರಿಯ ಬಿಜೆಪಿ ನಾಯಕ ಹರೀಶ ಖುರಾನಾ, “ಸಭೆಯಲ್ಲಿ ಹಾಜರಿದ್ದ ಒಬ್ಬ ವ್ಯಕ್ತಿ ಮುಖ್ಯಮಂತ್ರಿಯ ಮೇಲೆ ಹಲ್ಲೆ ನಡೆಸಿದರು. ವೈದ್ಯರು ಮುಖ್ಯಮಂತ್ರಿಯವರನ್ನು ಪರೀಕ್ಷಿಸುತ್ತಿದ್ದಾರೆ. ನಾವು ದಾಳಿಯನ್ನು ಖಂಡಿಸುತ್ತೇವೆ. ಈ ದಾಳಿ ರಾಜಕೀಯ ಪ್ರೇರಿತವಾಗಿದೆಯೇ ಎಂದು ತನಿಖೆ ಮಾಡಬೇಕು” ಎಂದು ಹೇಳಿದ್ದಾರೆ. ಅವರೊಂದಿಗೆ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.
ದಾಳಿಯ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಬಿಜೆಪಿ ಶಂಕಿಸಿದೆ. ಮುಖ್ಯಮಂತ್ರಿಯ ಕೆಲಸವನ್ನು ಪ್ರತಿಸ್ಪರ್ಧಿಗಳು ಸಹಿಸಲಾರರು ಮತ್ತು ದಾಳಿಕೋರನ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಯುತ್ತಿದೆ ಎಂದು ದೆಹಲಿ ಸಚಿವ ಮಂಜಿಂದರ ಸಿಂಗ್ ಸಿರ್ಸಾ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. “ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ, ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಸ್ಥಳವಿದೆ, ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ. ಮುಖ್ಯಮಂತ್ರಿ ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ ಎಂದು ಆಶಿಸುತ್ತೇವೆ,” ಎಂದು ದೆಹಲಿ ವಿಧಾನಸಭೆಯ ವಿಪಕ್ಷದ ನಾಯಕಿ ಅತಿಶಿ ಹೇಳಿದ್ದಾರೆ.
ದೆಹಲಿ ಪೊಲೀಸರ ಮೂಲಗಳ ಪ್ರಕಾರ, ಈ ದೊಡ್ಡ ಭದ್ರತಾ ಉಲ್ಲಂಘನೆಗೆ ಕಾರಣವಾದದ್ದನ್ನು ಪತ್ತೆ ಮಾಡಲು ತನಿಖೆ ನಡೆಸಲಾಗುತ್ತದೆ. ದೆಹಲಿ ಪೊಲೀಸ್ ಆಯುಕ್ತ ಎಸ್‌ಬಿಕೆ ಸಿಂಗ್ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ.

ಪ್ರಮುಖ ಸುದ್ದಿ :-   ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement