ವಿಜಯಪುರ ಜಿಲ್ಲೆಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ವಿಜಯಪುರ: ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗ ವಿಜಯಪುರ ‌ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿದೆ.
ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ಜಿಲ್ಲೆ ಇಂಡಿ ಪಟ್ಟಣದಲ್ಲಿ ಶಾಂತೇಶ್ವರ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಸಮೇತ ಇಂದು, ಸೋಮವಾರ ತರಗತಿಗೆ ಆಗಮಿಸಿದ್ದಾರೆ.
ಇಂದು, ಸೋಮವಾರ ಬೆಳಿಗ್ಗೆ ಕೇಸರಿ ಶಾಲು ಸಹಿತ ಆಗಮಿಸಿದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಮುಂದಾಗಿದ್ದರು. ಆದರೆ ಉಪನ್ಯಾಸಕರು ಅವರನ್ನು ತರಗತಿಯಿಂದ ಹೊರಗೆ ಕಳುಹಿಸಿದ್ದಾರೆ. ಕಾಲೇಜಿನಲ್ಲಿ ಯಾವುದೇ ಗೊಂದಲ ಉಂಟಾಗುವುದು ಬೇಡ ಆಡಳಿತ ಮಂಡಳಿ ಇಂದು ರಜೆ ಘೋಷಿಸಿದೆ. ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ಮುಂದಿನ ನಿರ್ಧಾರದ ಕುರಿತು ಚರ್ಚೆ ನಡೆಸುತ್ತಿದೆ.
ಹಿಜಾಬ್ ಸಂಬಂಧ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ನಾಳೆ. ಫೆಬ್ರುವರಿ 8ರಂದು ವಿಚಾರಣೆಗೆ ಬರಲಿದೆ.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement