ಜೀವಜಲ ತಂದ ಭಗೀರಥ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಗೌರವ

ಮಂಗಳೂರು: ಬೋಳುಗುಡ್ಡೆಯಲ್ಲಿ ಜೀವಜಲವನ್ನು ತರಿಸಿದ ಭಗೀರಥ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಗೌರವಕ್ಕೆ ಭಾಜನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಮಹಾಲಿಂಗ ನಾಯ್ಕ ಕೃಷಿ ಸಾಧಕ. ಪಂಪ್ ಸೆಟ್ ಸೌಲಭ್ಯಗಳಿಲ್ಲದ ಸಮಯದಲ್ಲಿ ಸುರಂಗ ನೀರಿನ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, ಅದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಾವರಿ ವ್ಯವಸ್ಥೆ ಕಲ್ಪಿಸಿರುವ ಮಹಾಲಿಂಗ ನಾಯ್ಕ ಅವರು ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದಿದ್ದಾರೆ.
ಇಳಿಜಾರು ಬೋಳು ಗುಡ್ಡೆಯಲ್ಲಿ ಕೃಷಿ ಮಾಡುವ ಸಾಹಸಕ್ಕೆ ಹೊರಟ ಮಹಾಲಿಂಗ ನಾಯ್ಕ ಅವರು ಸುರಂಗ ತೋಡಿದ ಯಶೋಗಾಥೆಗೆ ಈ ಪ್ರಶಸ್ತಿ ಲಭಿಸಿದೆ. ಸಮೃದ್ಧ ನೀರು ಪಡೆದ ಅವರು ಕೃಷಿ ಮಾಡಿ ಯಶಸ್ವಿಯಾಗಿದ್ದಾರೆ
ಇವರು ಸಾಲಕ್ಕಾಗಿ ಯಾವುದೇ ಬ್ಯಾಂಕ್ ಮೊರೆ ಹೋಗಿಲ್ಲ. ಕೃಷಿಯಲ್ಲಿ ದೊರೆತ ಆದಾಯದಿಂದ ಸ್ವಂತ ಮನೆ ಕಟ್ಟಿದ್ದಾರೆ. ಮನೆಗೆ ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳು ಇವೆ. ಶಾಲಾ ಕಾಲೇಜುಗಳ ಮೆಟ್ಟಿಲು ಹತ್ತದ ಮಹಾಲಿಂಗ ನಾಯ್ಕ ಅವರಿಗೆ ದುಡಿಮೆ ಎಲ್ಲವನ್ನೂ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement