ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ಮಂಡಳಿ ವಜಾಗೊಳಿಸಿದೆ. ಅಲ್ಲದೆ, ವಿದ್ಯಾರ್ಥಿಗಳ ಪರೀಕ್ಷಾ ಮೌಲ್ಯಮಾಪನ ನೀತಿಯನ್ನು ಎತ್ತಿಹಿಡಿದಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪ್ರಸ್ತಾಪಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ” ಎಂದು ಹೇಳಿರುವ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.
ಪೋಷಕರ ಕಾಳಜಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯಂಥ ಪ್ರಮುಖ ಅಂಶಗಳನ್ನು ಮುಖ್ಯವಾಗಿಟ್ಟುಕೊಂಡು ಮಂಡಳಿಗಳು ಮತ್ತು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿವೆ. ಇದರಲ್ಲಿ ನಾವು ಮಧ್ಯ ಪ್ರವೇಶಿಸವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಐಐಟಿ-ಜೆಇಇ ಅಥವಾ ಸಿಎಲ್‌ಎಟಿ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾದರೆ ಬೋರ್ಡ್‌ ಪರೀಕ್ಷೆಗಳನ್ನೂ ಇದೇ ಮಾದರಿಯಲ್ಲಿ ಏಕೆ ನಡೆಸಬಾರದು ಎಂದು ಅರ್ಜಿದಾರ ಅನ್ಶುಲ್ ಗುಪ್ತಾ ಅವರು ಅರ್ಜಿ ಸಲ್ಲಿಸಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಪೀಠ, “ಪ್ರತಿ ಮಂಡಳಿಯು ಭಿನ್ನವಾಗಿದೆ. ಅದರ ಅಗತ್ಯಗಳೂ ಭಿನ್ನವಾಗಿರುತ್ತವೆ. ನಿರ್ಧಾರ ಆ ಮಂಡಳಿ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರಮುಖ ಸುದ್ದಿ :-   ಒಂದೇ ಕಡೆ ಒಟ್ಟುಗೂಡಿದ 150 ಜೋಡಿ ಅವಳಿ-ತ್ರಿವಳಿಗಳು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement