ʼನಿಜವಾದ ಶಿವಸೇನೆ’ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಉದ್ಧವ್‌ ಠಾಕ್ರೆ ಬಣಕ್ಕೆ ಭಾರೀ ಹಿನ್ನಡೆ

ನವದೆಹಲಿ: ಏಕನಾಥ  ಶಿಂಧೆ ವಿರುದ್ಧದ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ನಿಜವಾದ ಶಿವಸೇನೆ ಯಾರ ಬಣ ಎಂಬುದನ್ನು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ತಡೆ ನೀಡುವುದಕ್ಕೆ ಸುಪ್ರೀಂಕೋರ್ಟ್ ಇಂದು, ಮಂಗಳವಾರ ನಿರಾಕರಿಸಿದೆ.ಮಹಾರಾಷ್ಟ್ರದಲ್ಲಿ “ನಿಜವಾದ” ಶಿವಸೇನೆ ಯಾರದ್ದು..? ಏಕನಾಥ ಶಿಂಧೆ ಬಣವೋ ಅಥವಾ ಉದ್ಧವ್ ಠಾಕ್ರೆ ಬಣವೋ ಎಂದು ನಿರ್ಧರಿಸಲು ಚುನಾವಣಾ ಆಯೋಗದ ಪ್ರಕ್ರಿಯೆಗಳಿಗೆ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಈ ಕುರಿತು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ.  ಈ ನಿರ್ಧಾರವು ಸಿಎಂ ಏಕನಾಥ್ ಶಿಂಧೆ ಪಾಳಯಕ್ಕೆ ದೊಡ್ಡ ಗೆಲುವು ಎಂದು ವ್ಯಾಖ್ಯಾನಿಸಲಾಗುತ್ತಿದೆ.

ನಿಜವಾದ” ಶಿವಸೇನೆ ಮತ್ತು ಅದರ ಚಿಹ್ನೆಯ ಮೇಲೆ ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಹಕ್ಕನ್ನು ಚುನಾವಣಾ ಆಯೋಗವು ನಿರ್ಧರಿಸದಂತೆ ತಡೆಯಬೇಕೆಂದು ಉದ್ಧವ್ ಠಾಕ್ರೆ ಅವರ ಬಣವು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು.
ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರ ಸರ್ಕಾರವು ಜೂನ್‌ನಲ್ಲಿ ಅವರ ಮಾಜಿ ಆಪ್ತ ಏಕನಾಥ ಶಿಂಧೆ ನೇತೃತ್ವದ ಬಂಡಾಯದ ನಂತರ ಪತನಗೊಂಡಿತು, ನಂತರ ಏಕನಾಥ ಶಿಂಧೆ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಿದರು. ಜೂನ್ 30 ರಂದು ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು, ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಆಗಸ್ಟ್ 23 ರಂದು, ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದ ಹಲವಾರು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಿರುವ ಉದ್ಧವ್ ಠಾಕ್ರೆ ಮತ್ತು ಶಿಂಧೆ ನೇತೃತ್ವದ ಬಣಗಳು ಸಲ್ಲಿಸಿದ ಅರ್ಜಿಗಳನ್ನು ಐವರು ನ್ಯಾಯಾಧೀಶರ ಪೀಠದ ಮುಂದೆ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಪಕ್ಷಾಂತರಗೊಂಡ ಶಾಸಕರ ಅನರ್ಹತೆ, ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರ ಮತ್ತು ನ್ಯಾಯಾಂಗ ಪರಾಮರ್ಶೆ ಕುರಿತು ಅರ್ಜಿಗಳು ಪ್ರಮುಖ ಸಾಂವಿಧಾನಿಕ ವಿಷಯಗಳನ್ನು ಎತ್ತುತ್ತವೆ ಎಂದು ನ್ಯಾಯಾಲಯ ಹೇಳಿದೆ.
ಏಕನಾಥ್ ಶಿಂಧೆ ಅವರಿಗೆ ನಿಷ್ಠರಾಗಿರುವ ಶಾಸಕರು ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಂಡರೆ ಮಾತ್ರ ಸಂವಿಧಾನದ 10 ನೇ ಶೆಡ್ಯೂಲ್ ಅಡಿಯಲ್ಲಿ ಅನರ್ಹತೆಯನ್ನು ತಪ್ಪಿಸಬಹುದು ಎಂದು ಠಾಕ್ರೆ ಬಣ ನ್ಯಾಯಾಲಯಕ್ಕೆ ತಿಳಿಸಿತ್ತು. ಸ್ವಂತ ಪಕ್ಷದ ವಿಶ್ವಾಸ ಕಳೆದುಕೊಂಡಿರುವ ನಾಯಕನಿಗೆ ಪಕ್ಷಾಂತರ ನಿಷೇಧ ಕಾನೂನು ಅಸ್ತ್ರವಾಗಲಾರದು ಎಂದು ಶಿಂಧೆ ಬಣ ವಾದಿಸಿತ್ತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement