ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಯೋಗ ಶಿಕ್ಷಕನ ಬಂಧನ

ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಶಿಕ್ಷಕನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳುದಬಂದಿದೆ.
ಹದಿನೇಳು ವರ್ಷದ ಬಾಲಕಿ ದೂರಿನ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಯೋಗ ಶಿಕ್ಷಕ ನಿರಂಜನಾ ಮೂರ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಯೋಗ ಶಿಕ್ಷಕ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗುತ್ತದೆ ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ.
ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ, ಅದರಿಂದ ನಿಮಗೆ ಸರ್ಕಾರಿ ಕೆಲಸ ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್‌ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಕೆಲ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪವೂ ಇದೆ. ತನಿಖೆ ಮುಂದುವರಿದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement