ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಕ್ಕೆ ಹತ್ತಿರವಾದ ಬೈಲಪಾರ- ಐಪಿಎಂ ಹತ್ತಿರದ ಕಾಳಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಸತ್ತುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ನದಿಯಲ್ಲಿ ಮೊಸಳೆ ಏನು ಮಾಡಿದರೂ ಚಲಿಸದ ಸ್ಥಿತಿಯಲ್ಲಿ ಕಂಡುಬಂದಿದ್ದರಿಂದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮೊಸಳೆಯು ಸತ್ತಿದ್ದನ್ನು ಖಚಿತಪಡಿಸಿಕೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ದಡಕ್ಕೆ ತಂದು ಪಶು ಆಸ್ಪತ್ರೆಗೆ ಸಾಗಿಸಿ ಮೊಸಳೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೊಸಳೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ವರದಿ ಹೇಳಿದೆ. ಸುಮಾರು 10 ಅಡಿ ಉದ್ದದ ಈ ಬೃಹತ್ ಮೊಸಳೆಯ
ಮೊಸಳೆಯ ಸಾವಿಗೆ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿನ ಕಾರಣ ತಿಳಿದುಬರಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ