ಸಾರ್ವಜನಿಕರ‌ ಮೊಬೈಲ್‌ ಕಸಿದುಕೊಳ್ಳಬೇಡಿ: ಪೊಲೀಸರಿಗೆ ಬೆಂಗಳೂರು ಆಯುಕ್ತರಿಂದ ಟ್ವೀಟ್​

ಬೆಂಗಳೂರು : ತಪಾಸಣೆ‌ ನಡೆಸುವಾಗ ಪೊಲೀಸರು ಅನುಮತಿಯಿಲ್ಲದೇ ಸಾರ್ವಜನಿಕರ‌‌ ಮೊಬೈಲ್​​ಗಳನ್ನು ಬಲವಂತವಾಗಿ ಕಸಿದುಕೊಂಡು ಪರಿಶೀಲಿಸುವುದು ಸರಿಯಾದ ಕ್ರಮವಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಟ್ವೀಟ್‌ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಪಾಸಣೆ ನಡೆಸುವಾಗ ಸಾರ್ವಜನರಿಂದ ಪೊಲೀಸರು ಮೊಬೈಲ್ ಕಸಿದುಕೊಂಡು, ವೈಯಕ್ತಿಕ ವಿಚಾರಗಳ ಬಗ್ಗೆ ಪ್ರಶ್ನಿಸುತ್ತಿರುವ ದೂರುಗಳು ಕೇಳಿ ಬಂದಿತ್ತು. ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ನಿಖಿಲ್ ಎಂಬುವರು ಘಟನೆಯೊಂದರ ಬಗ್ಗೆ ಇತ್ತೀಚಿಗೆ ಟ್ವೀಟ್​ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್‌ ಆಯುಕ್ತರಿಂದ ಈ ಟ್ವೀಟ್‌ ಬಂದಿದೆ.

ನಗರ ಪೊಲೀಸ್ ಆಯುಕ್ತರ ಟ್ವಿಟರ್​ ಖಾತೆಗೆ ಟ್ಯಾಗ್ ಮಾಡಿದ್ದರು. ಇದಕ್ಕೆ‌‌ ಪ್ರತಿಕ್ರಿಯಿಸಿರುವ ಆಯುಕ್ತರು, ಅನುಮತಿಯಿಲ್ಲದೇ ಸಾರ್ವಜನಿಕರ‌‌ ಮೊಬೈಲ್​ಗಳನ್ನು ಬಲವಂತವಾಗಿ ಕಸಿದುಕೊಳ್ಳಬಾರದು. ಯಾರಾದರೂ ಅನಗತ್ಯವಾಗಿ ಪೊಲೀಸರು ಮೊಬೈಲ್‌ ತೆಗೆದುಕೊಂಡರೆ ಮಾಹಿತಿ ನೀಡಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement