ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಸಾಹಿತಿಗಳು ಇದನ್ನು ಸಾಬೀತು ಮಾಡಿದ್ದಾರೆ. ನಮ್ಮ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತ್ರಿಗಳು ಲಭಿಸಿರುವುದಕ್ಕೆ ಹೆಮ್ಮೆಯಿದೆ. ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ಇಂತಹ ನಾಡಿನಲ್ಲಿ ಜನಿಸಲು ನಾವು ಪುಣ್ಯ ಮಾಡಿರಬೇಕು ಎಂದು ಹೇಳಿದ ನಂತರ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಹೇಳಿಕೆ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಬೆಳಗಾವಿ ಕರ್ನಾಟಕಕ್ಕೆ ಸೇರಿ ಅನೇಕ ವರ್ಷಗಳಾಗಿದೆ. ಓಟಿನ ರಾಜಕಾರಣಕ್ಕೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಹೇಳಿಕೆ ನೀಡಿರುವುದು ವಿಷಾದಕರ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗಿಡಬೇಕು.ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು. ಹಾಗಾಗಿಯೇ ಬೆಳಗಾವಿ ಅಧಿವೇಶನ ಮಾಡಲಾಗುತ್ತಿದೆ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಡಾ. ಅಶ್ವಥ್ ನಾರಾಯಣ್ ಮಾತನಾಡಿ, ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿ ಹೋಗಿತ್ತು. ಅದಕ್ಕೆ‌ ಕರ್ನಾಟಕ ಏಕೀಕರಣ ಆಗಿದೆ. ಇದು ರಾಜಕೀಯ ಪ್ರೇರಿತ ಹೇಳಿಕೆ. ಈ ಸಂದರ್ಭದಲ್ಲಿ ಅವಶ್ಯಕತೆ ಇರಲಿಲ್ಲ. ಬೆಳಗಾವಿ ಕರ್ನಾಟಕಕ್ಕೆ ಸೇರಿದೆ. ಇವರ ಹೇಳಿಕೆಯನ್ನು ಮರಾಠಿಗರಾಗಲಿ, ಕನ್ನಡಿಗರಾಗಲಿ ಬೆಂಬಲಿಸಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement