ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಸಿದ್ಧಗಂಗಮ್ಮ (65) ಮೃತಪಟ್ಟಿದ್ದಾರೆ.
ಕೆಲ ದೇವಸ್ಥಾನಗಳಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಸೋಮವಾರ ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಆಸ್ಪತ್ರೆಗಳಲ್ಲಿ ದಾಖಲಾಗಿದ್ದವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವಾಂತಿಭೇದಿಯಿಂದಲೇ ಮಹಿಳೆ ಸಾವನ್ನಪ್ಪಿದ್ದಾರೆಯೇ? ಅಥವಾ ಬೇರೆ ಕಾರಣಗಳಿಂದ ಮೃಪಟ್ಟಿರಬಹುದೇ ಎಂಬುದು ವರದಿಯಿಂದ ಖಚಿತಪಡಿಸಿಕೊಳ್ಳಬೇಕಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement