ಕಂದಹಾರ್‌: ತಾಲಿಬಾನ್ ದಾಳಿಯಲ್ಲಿ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೋ ವರದಿಗಾರ ಡ್ಯಾನಿಶ್ ಸಿದ್ದಿಕಿ ಸಾವು

ಕಾಬೂಲ್‌: ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ತಾಲಿಬಾನ್‌ ನಡೆಸಿದ ಘರ್ಷಣೆಯ ಸಂದರ್ಭ ಭದ್ರತಾ ಪಡೆಯೊಂದಿಗೆ ಇದ್ದ ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಗುರುವಾರ ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ಭಾರತದ ರಾಯಭಾರಿ ಫರೀದ್ ಮಾಮುಂಡ್‌ಜೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ನಿನ್ನೆ ರಾತ್ರಿ ಕಂದಹಾರ್‌ನಲ್ಲಿ ಸ್ನೇಹಿತ ಡ್ಯಾನಿಶ್ ಸಿದ್ದಿಕಿ ಹತ್ಯೆಯ ಸುದ್ದಿಯಿಂದ ತೀವ್ರ ದುಃಖಿತನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅಫ್ಘಾನ್‌ ಭದ್ರತಾ ಪಡೆಗಳ ಮೇಲೆ ತಾಲಿಬಾನ್‌ಗಳು ದಾಳಿ ನಡೆಸಿದಾಗ ಅಲ್ಲಿದ್ದರು ಎಂದು ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.
40 ವರ್ಷದ ಸಿದ್ದಿಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಟೋಲೋ ನ್ಯೂಸ್ ಮೂಲಗಳನ್ನು ಉಲ್ಲೇಖಿಸಿದೆ ವರದಿ ಮಾಡಿದೆ. ಮುಂಬೈನಲ್ಲಿ ನೆಲೆಸಿರುವ ಭಾರತೀಯ ಪತ್ರಕರ್ತ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯ ಬಗ್ಗೆ ವರದಿ ಮಾಡುತ್ತಿದ್ದರು.
ರೋಹಿಂಗ್ಯಾ ನಿರಾಶ್ರಿತರ ದುಃಸ್ಥಿತಿಯನ್ನು ಬಗ್ಗೆ ಸಿದ್ದಿಕಿ ಸೆರೆಹಿಡಿದ ಚಿತ್ರಕ್ಕೆ 2018 ರಲ್ಲಿ ಪುಲಿಟ್ಜೆರ್ ಪ್ರಶಸ್ತಿ ಲಭಿಸಿದೆ. 2017 ರಲ್ಲಿ ನಿರಾಶ್ರಿತರ ಚಿತ್ರಗಳನ್ನು ತೆಗೆದ ಪತ್ರಕರ್ತರ ತಂಡದ ಭಾಗವಾಗಿದ್ದರು.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ ಡ್ಯಾನಿಶ್ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದು 2007 ರಲ್ಲಿ ಜಾಮಿಯಾದ ಎಜೆಕೆ ಮಾಸ್ ಕಮ್ಯುನಿಕೇಷನ್ ರಿಸರ್ಚ್ ಸೆಂಟರ್ನಿಂದ ಮಾಸ್ ಕಮ್ಯುನಿಕೇಷನ್‌ನಲ್ಲಿ ಪದವಿ ಪಡೆದರು.
ಟೆಲಿವಿಷನ್ ಸುದ್ದಿ ವರದಿಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸಿದ್ಧಿಕಿ, ಬಳಿಕ ಫೋಟೊ ವರದಿಗಾರಿಕೆಯಲ್ಲಿ ತೊಡಗಿಕೊಂಡರು. 2010 ರಲ್ಲಿ ರಾಯಿಟರ್ಸ್‌ನ ಇಂಟರ್ನ್ ಆಗಿ ಸೇರ್ಪಡೆಯಾದರು.
ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ಹಿಂಪಡೆದ ಬೆನ್ನಲ್ಲೇ ಅಫ್ಘಾನಿಸ್ತಾನದ ಹಲವಾರು ಜಿಲ್ಲೆಗಳನ್ನು ತಾಲಿಬಾನ್‌ ವಶಕ್ಕೆ ಪಡೆದುಕೊಂಡಿದೆ. ಈ ವಾರ ಕಂದಹಾರ್‌ನಲ್ಲಿ ಸ್ಪಿನ್ ಬೋಲ್ಡಾಕ್ ಜಿಲ್ಲೆಯನ್ನು ತಾಲಿಬಾನ್ ವಶಪಡಿಸಿಕೊಂಡಿದ್ದು ಕಳೆದ ಕೆಲವು ದಿನಗಳಿಂದ ಕಂದಹಾರ್‌ನಲ್ಲಿ, ವಿಶೇಷವಾಗಿ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘನ್‌ ಪಡೆಗಳು ಹಾಗೂ ತಾಲಿಬಾನಿಗಳ ನಡುವೆ ತೀವ್ರ ಘರ್ಷಣೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement