ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ರಾಮನಗರ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಮಹದೇವಯ್ಯ ಅವರ ಕಾರು ಚಾಮರಾಜನಗದಲ್ಲಿ ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಮಾದರಿ ಕಲೆಗಳು ಕಂಡುಬಂದಿದೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಡಿಸೆಂಬರ್ 1 ಶುಕ್ರವಾರ ರಾತ್ರಿಯಿಂದ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಅವರ ಕಾರು ಕೂಡ ನಾಪತ್ತೆಯಾಗಿತ್ತು. ಇದೀಗ ಕಾರು ಪತ್ತೆಯಾಗಿದ್ದು, ಆದರೆ ಮಹದೇವಯ್ಯ ಅವರ ಬಗ್ಗೆ ಸುಳಿವು ಸಿಕ್ಕಿಲ್ಲ. ಘಟನೆಗೆ ಸಂಬಂಧಿಸಿ ಪೊಲೀಸರು ಅಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ, ಫಿಂಗರ್ ಫ್ರಿಂಟ್ ತಂಡ, ಶ್ವಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ‌ ಪತ್ತೆಯಾಗಿರುವ ಕಾರನ್ನು ನೈಟ್ ಬೀಟ್ ಪೊಲೀಸರು ಪತ್ತೆಹಚ್ಚಿದ್ದು ಪರಿಶೀಲನೆ ನಡೆಸಿದಾಗ ಮಹದೇವಯ್ಯ ಅವರಿಗೆ ಸೇರಿದ್ದ ಕಾರು ಎಂಬುದು ಗೊತ್ತಾಗಿದೆ.
ರಾಮನಗರದ ಪೊಲೀಸ್ ತನಿಖಾ ತಂಡವೂ ಪರಿಶೀಲನೆ ನಡೆಸಿದೆ. ಕಾರು ಹನೂರು ತಾಲೂಕಿನ ರಾಮಾಪುರಕ್ಕೆ ಬಂದಿದ್ದು ಹೇಗೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ ನಾಪತ್ತೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದೆ. ರಿಯಲ್‌ ಎಸ್ಟೇಟ್‌ ವಿಚಾರದಲ್ಲಿ ಮಹದೇವಯ್ಯ ಕಿಡ್ನಾಪ್ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಹದೇವಯ್ಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ವಿಶೇಷ ತಂಡಗಳನ್ನು ರಚನೆ ಮಾಡಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement