ಜುಲೈ 27 ರಂದು ಉಡುಪಿ ಜಿಲ್ಲೆಯ ಶಾಲೆ-ಪಿಯು ಪೂರ್ವ ಕಾಲೇಜುಗಳಿಗೆ ರಜೆ, ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ಮಾತ್ರ ರಜೆ

ಉಡುಪಿ/ಮಂಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜುಲೈ 27ರಂದು ಗುರುವಾರ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಮಂಗಳೂರು…: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಪಕದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಕೇವಲ ಶಾಲೆಗಳಿಗೆ ಮಾತ್ರ ರಜೆ ಎಂದು ಉಲ್ಲೇಖಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement