ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ: ವಕ್ಫ್‌ ಬೋರ್ಡಿನಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು: ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.
ರಾಜ್ಯ ವಕ್ಫ್‌ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಯೂಸುಫ್, ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕಗಳ ಮೂಲಕ ಫಜರ್ ಸೇರಿದಂತೆ ಅಝಾನ್, ನಿಧನವಾರ್ತೆ, ದಫನ್ ಕಾರ್ಯದ ಸಮಯ, ಚಂದ್ರ ದರ್ಶನದಂಥ ಪ್ರಮುಖ ಘೋಷಣೆ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೊರಡಿಸಿದ್ದ ಸುತ್ತೋಲೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ವಕ್ಫ್‌ ಬೋರ್ಡ್‌ ತಿಳಿಸಿದೆ.
ಮಸೀದಿ, ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕಗಳನ್ನು ಬಳಸದಂತೆ ವಕ್ಫ್‌ ಬೋರ್ಡ್‌ ಮಂಗಳವಾರ ಸುತ್ತೋಲೆ ಹೊರಡಿಸಿತ್ತು. ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳ ಅನುಸರಣೆಗೆ ಈ ನಿಯಮ ಅವಶ್ಯಕ ಎಂದು ತಿಳಿಸಿತ್ತು.
ಆದರೆ ಸುತ್ತೋಲೆ ಹೊರಡಿಸಿದ ನಂತರ ಉಂಟಾದ ಗೊಂದಲ ನಿವಾರಿಸಲು ಪರಷ್ಕೃತ ಸುತ್ತೋಲೆ ಹೊರಡಿಸಿದ್ದು, ಧ್ವನಿವರ್ಧಕದ ಮೂಲಕ ಫಜರ್ ನಮಾಜ್ ಸಂದರ್ಭ ಅಝಾನ್ ನೀಡಲು ಯಾವುದೇ ನಿರ್ಬಂಧ ಇಲ್ಲ ಎಂದು ಬೋರ್ಡ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಧ್ವನಿವರ್ಧಕ ಬಳಕೆ ನಿಷೇಧವನ್ನು ಬೆಳಿಗ್ಗೆ ಅಝಾನ್‌ಗೆ ನಿಷೇಧ ಎಂದು ತಪ್ಪಾಗಿ ಅರ್ಥೈಸಿಕೊಳ್ಳಲಾಗಿತ್ತು. ನಿಗದಿತ ಮಾನದಂಡಗಳನ್ನು ಅನುಸರಿಸಿ ಬೆಳಿಗ್ಗೆ ಅಝಾನ್‌ಗೆ ಧ್ವನಿವರ್ಧಕ ಬಳಸುವುದನ್ನು ತಡಯುವುದಿಲ್ಲ ಎಂದು ಹೊಸ ಸುತ್ತೋಲೆಯಲ್ಲಿ ತಿಳಿಸಲಾಗಿದೆ

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement