ಬೆಂಗಳೂರು : ಕರ್ನಾಟಕದಲ್ಲಿ ಅಕ್ಟೋಬರ್ 9 ರವರೆಗೆ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಜೋರಾಗಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ಈ ಭಾಗದಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಹ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ. ಉಡುಪಿ, ಉತ್ತರ ಕನ್ನಡ ಮತ್ತುದ ಜಿಲ್ಲೆಗಳಿಗೆ ಮಳೆರಾಯ ತುಸು ವಿರಾಮ ನೀಡಿದ್ದಾನೆ. ಈ ಭಾಗದಲ್ಲಿ ಮುಂದಿನ ಐದಾರು ದಿನ ಸಾಧಾರಣವಾಗಿ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಮಾನ್ಯವಾಗಿ ಮಳೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸ್ವಲ್ಪ ಬಿರುಸು ಮಳೆ ಸುರಿಯಬಹುದು ಎಂದು ಹೇಳಲಾಗಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಅಕ್ಟೋಬರ್ 6ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಬಳಿಕ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ ಆಗಲಿದೆ. ಆಗಬಹುದಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ