ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜೂನ್ 4 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 7ರ ಬೆಳಿಗ್ಗೆ6 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮತ್ತು ಹಾಲು ಖರೀದಿಗೆ ಅನ್ವಯಿಸುವುದಿಲ್ಲ. ಆನ್ ಲೈನ್ ಫುಡ್ ಪಾರ್ಸಲ್ ಗಳಿಗೆ, ಕಚೇರಿಗಳಿಗೆ ಕೆಲಸಕ್ಕೆ ಹೋಗುವವರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ ರೈತ ಸಂಪರ್ಕ ಕೇಂದ್ರಕ್ಕೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12ರ ವರಗೆ ಮಾತ್ರ ಅವಕಾಶ ನೀಡಲಾಗಿದೆ. ಕೇಂದ್ರಕ್ಕೆ ಬರುವ ರೈತರು ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದಿರಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಈ ಅವಧಿಯಲ್ಲಿ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪೂರ್ವಾನುಮತಿ ಪಡೆದುಕೊಂಡ ಮದುವೆ ಸಮಾರಂಭಗಳಿಗೆ ಮಾತ್ರ ನಿಗದಿ ಪಡಿಸಿದ ಮಾರ್ಗಸೂಚಿಯನ್ವಯ ಅನುಮತಿ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ಲಾಕ್‌ಡೌನ್ ಆದೇಶವನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ