ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಮಹಾ ಸಂಕಟ: ಶಿವಸೇನೆಯೊಳಗಿನ ‘ದಂಗೆ’ ಶಮನಕ್ಕೆ ಉದ್ಧವ ಠಾಕ್ರೆ ಪ್ರಯತ್ನ

ಮುಂಬೈ: ಸೋಮವಾರದ ವಿಧಾನ ಪರಿಷತ್ತಿನ ಚುನಾವಣೆಯ ನಂತರ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಮತ್ತು ಪಕ್ಷದ ಇತರ ಹಲವಾರು ಶಾಸಕರು ಯಾರ ಸಂಪರ್ಕಕ್ಕೂ ಸಿಗದೆ ಹೋದಾಗ ರಾಜಕೀಯ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಪ್ರಾರಂಭವಾಯಿತು. ಇದು ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಪಕ್ಷಗಳಲ್ಲಿ ಒಂದಾದ ಶಿವಸೇನೆಯೊಳಗೆ ಸಂಭವನೀಯ ದಂಗೆಗೆ ಕಾರಣವಾಯಿತು.
ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ನಲ್ಲಿ ಏಕನಾಥ್ ಶಿಂಧೆ ಮತ್ತು ಇತರ ‘ಕಾಣೆಯಾದ’ ಶಿವಸೇನೆ ಶಾಸಕರು ತಂಗಿದ್ದರು. ಹೋಟೆಲ್ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾರಿಗೂ ಪ್ರವೇಶವನ್ನು ಅನುಮತಿಸಲಾಗಿಲ್ಲ. ಅಜ್ಞಾತವಾಸಕ್ಕೆ ತೆರಳಿದ್ದ ಶಾಸಕರ ಮೇಲೆ ಅನಿಶ್ಚಿತತೆ ಹೆಚ್ಚಾದಾಗ, ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ತಕ್ಷಣವೇ ಸಮಸ್ಯೆ ನಿವಾರಣೆಗೆ ಮುಂದಾದರು. ಹಾಗೂ ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ಭೇಟಿ ಮಾಡಿ ಅವರನ್ನು ಸಮಾಧಾನಪಡಿಸಲು ಇಬ್ಬರು ನಾಯಕರಾದ ಮಿಲಿಂದ್ ನಾರ್ವೇಕರ್ ಮತ್ತು ರವೀಂದ್ರ ಫಾಟಕ್ ಅವರನ್ನು ಸಂಧಾನಕಾರರಾಗಿ ಕಳುಹಿಸಿದರು.

ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಮಿಲಿಂದ್ ನಾರ್ವೇಕರ್ ಅವರು ಏಕನಾಥ್ ಶಿಂಧೆ ಅವರನ್ನು ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುವಂತೆ ಒಪ್ಪಿಸಿದರು ಎಂದು ಮೂಲಗಳು ತಿಳಿಸಿವೆ. ಶಿವಸೇನೆಯು ಬಿಜೆಪಿ ಜೊತೆಗಿನ ಮೈತ್ರಿಯನ್ನು ಮರುಸ್ಥಾಪಿಸಬೇಕು ಎಂದು ಏಕನಾಥ್ ಶಿಂಧೆ ಷರತ್ತು ಹಾಕಿದ್ದಾರೆ ಹಾಗೂ ತನ್ನೊಂದಿಗೆ ಇರುವ ಎಲ್ಲ ಶಾಸಕರು ಸಹ ಇದನ್ನೇ ಬಯಸಿದ್ದಾರೆ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಶಿವಸೇನೆಯನ್ನು ಕೇಸರಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿ ಉದ್ಧವ್ ಠಾಕ್ರೆ ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರಾಕರಿಸಿದಾಗ, ಸೂರತ್‌ನಲ್ಲಿನ ಶಾಸಕರಿಗೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಶಿವಸೇನೆ ಮೈತ್ರಿ ಮಾಡಿಕೊಳ್ಳುವುದಕ್ಕೆ ತೀವ್ರ ಅಸಮಾಧಾನವಿದೆ ಎಂದು ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಶಾಸಕಾಂಗ ಗುಂಪಿನ ನಾಯಕತ್ವದಿಂದ ತೆಗೆದುಹಾಕಲ್ಪಟ್ಟ ಏಕನಾಥ್ ಶಿಂಧೆ ಅವರು ಉದ್ಧವ್ ಠಾಕ್ರೆ ಅವರಿಗೆ ತಾನು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿಲ್ಲ ಮತ್ತು ತನ್ನ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಮುಂಬೈನಲ್ಲಿ, ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಮಂಗಳವಾರ ಸಂಜೆ ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಸಭೆಯಲ್ಲಿ ಎನ್‌ಸಿಪಿ ನಾಯಕರಾದ ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಜಯಂತ್ ಪಾಟೀಲ್ ಮತ್ತು ಅಜಿತ್ ಪವಾರ್ ಇದ್ದರು.

ಪ್ರಮುಖ ಸುದ್ದಿ :-   ವಿಭವಕುಮಾರ 7-8 ಬಾರಿ ನನ್ನ ಕಪಾಳಕ್ಕೆ ಹೊಡೆದಿದ್ದಾನೆ, ಹೊಟ್ಟೆಗೆ ಒದ್ದಿದ್ದಾನೆ....: ಎಫ್‌ಐಆರ್‌ನಲ್ಲಿ ಸಂಸದೆ ಸ್ವಾತಿ ಮಲಿವಾಲ್ ಆರೋಪ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವೇನು?
ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ ಹಲವು ಪಕ್ಷದ ಶಾಸಕರೊಂದಿಗೆ ತೆರಳುವ ಮೂಲಕ ರಾಜ್ಯದಲ್ಲಿ ಆಡಳಿತಾರೂಢ ಮೈತ್ರಿಕೂಟವನ್ನು ರಾಜಕೀಯ ಬಿಕ್ಕಟ್ಟಿಗೆ ಏಕನಾಥ್ ಶಿಂಧೆ ಸಿಲುಕಿಸಿದ್ದಾರೆ. ಈ ಕ್ರಮವು ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಒಳಗೊಂಡಿರುವ ಎಂವಿಎ ಸರ್ಕಾರದ ಭವಿಷ್ಯದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ.
ನಾಲ್ಕು ಬಾರಿ ಶಿವಸೇನೆ ಶಾಸಕರಾಗಿದ್ದ ಏಕನಾಥ್ ಶಿಂಧೆ ಅವರನ್ನು ಬದಿಗೊತ್ತಿದ ಆರೋಪದ ಮೇಲೆ ಶಿವಸೇನೆ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಲು ಮೂರನೇ ಪ್ರಯತ್ನ ಮಾಡಲಾಗುತ್ತಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಆರೋಪಿಸಿದ್ದಾರೆ.
ಏಕನಾಥ್ ಶಿಂಧೆ ಬಂಡಾಯದ ಬಗ್ಗೆ ಮಾತನಾಡಿದ ಶರದ್ ಪವಾರ್, ಇದು ಶಿವಸೇನೆಯ ಆಂತರಿಕ ವಿಚಾರ. “ಅವರು ತಮ್ಮ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾವು ಹೆದರುವುದಿಲ್ಲ” ಎಂದು ಅವರು ಹೇಳಿದರು.
ಏತನ್ಮಧ್ಯೆ, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಮಲ್ ನಾಥ್ ಅವರನ್ನು ಮಹಾರಾಷ್ಟ್ರಕ್ಕೆ ಎಐಸಿಸಿ ವೀಕ್ಷಕರನ್ನಾಗಿ ನಿಯೋಜಿಸಿದೆ.
ಮಹಾರಾಷ್ಟ್ರ ಕಾಂಗ್ರೆಸ್, “ಎಲ್ಲಾ ಕಾಂಗ್ರೆಸ್ ಶಾಸಕರು ರಾಜ್ಯಾಧ್ಯಕ್ಷ ನಾನಾ ಪಾಟೋಲೆ ಮತ್ತು ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಶಾಸಕರನ್ನು ತಲುಪಲು ಸಾಧ್ಯವಾಗದಿರುವ ಬಗ್ಗೆ ಯಾವುದೇ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬಾಳಾಸಾಹೇಬ್ ಥೋರಟ್ ರಾಜೀನಾಮೆ ನೀಡಿದ ಸುದ್ದಿಯೂ ತಪ್ಪು, ಏಕೆಂದರೆ ಅವರು ತಮ್ಮ ನಿವಾಸದಿಂದಲೇ ಇಡೀ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ಬಿಜೆಪಿಯ ಪ್ರತಿಕ್ರಿಯೆ ಏನು?
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಂತರ, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್, “ಏನನ್ನೂ ಹೇಳಲು ಇದು ತುಂಬಾ ಮುಂಚೆಯಾಗುತ್ತದೆ. ನಾವು ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ. ಏಕನಾಥ್ ಶಿಂಧೆ ಅವರು ಬಿಜೆಪಿಗೆ ಸರ್ಕಾರ ರಚನೆಯ ಬಗ್ಗೆ ಪ್ರಸ್ತಾಪವನ್ನು ಕಳುಹಿಸಿಲ್ಲ ಮತ್ತು ಬಿಜೆಪಿ ಅವರಿಗೆ ಯಾವುದೇ ಪ್ರಸ್ತಾಪವನ್ನು ಕಳುಹಿಸಿಲ್ಲ ಎಂದು ಹೇಳಿದ್ದಾರೆ.
ಆದರೆ ರಾಜಕೀಯದಲ್ಲಿ ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು ಎಂದು ಚಂದ್ರಕಾಂತ ಪಾಟೀಲ ಹೇಳಿದರು.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಕಿ ಅಂಶಗಳ ಸ್ಥಿತಿಗತಿಗಳು ಏನು ಹೇಳುತ್ತವೆ..?
ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಸಂಖ್ಯಾಬಲ 288. ಒಂದು ಸ್ಥಾನ ಖಾಲಿಯಿದ್ದು ಬಹುಮತಕ್ಕೆ 144 ಬೇಕು. ಶಿವಸೇನೆಯ ಬಂಡಾಯದ ಮೊದಲು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ), ಶಿವಸೇನೆ ಮತ್ತು ಕಾಂಗ್ರೆಸ್ ಸೇರಿ ಶಾಸಕರ ಸಂಖ್ಯೆ 168 ಇದ್ದರೆರೆ, ಎನ್‌ಡಿಎ 113 ಸ್ಥಾನಗಳನ್ನು ಹೊಂದಿದೆ.
ಏಕನಾಥ್ ಶಿಂಧೆ ತಮ್ಮ ಬಳಿ 35 ಶಾಸಕರಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಶಾಸಕರು ರಾಜೀನಾಮೆ ನೀಡಿದರೆ, ಅದು ಸದನದಲ್ಲಿ ಮಹಾ ವಿಕಾಸ್ ಅಗಾಡಿ ಅವರ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಮತ್ತು ಸರ್ಕಾರವನ್ನು ಪತನಗೊಳಿಸಬಹುದು.
ಏಕನಾಥ್ ಶಿಂಧೆ ಅವರ ಬಂಡಾಯದಿಂದ ಉಂಟಾದ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಹಾರಾಷ್ಟ್ರ ಸಚಿವ ಸಂಪುಟವು ಜೂನ್ 22ರ ಬುಧವಾರದಂದು ಸಭೆ ಸೇರಲಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement