ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ.
ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಅನ್ವಯ ತನಿಖೆ ಆರಂಭಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ನೀಡಿದ ಆದೇಶದಂತೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ A 1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಇತರರು ಎ5 ಎಂದು ಎಫ್ಐಆರ್ನಲ್ಲಿ ದಾಖಲು ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ