ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ.
ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಗುಪ್ತಚರ ಮಾಹಿತಿಯನ್ನು ಹಂಚಿಕೊಂಡಿದ್ದ ಎಂದು ಹೇಳಲಾಗಿದೆ.
ತನಿಖೆಯ ಸಮಯದಲ್ಲಿ, ಈತ ರಾಜಘಾಟ್, ನಮೋ ಘಾಟ್, ಜ್ಞಾನವಾಪಿ, ರೈಲ್ವೆ ನಿಲ್ದಾಣ ಮತ್ತು ಕೆಂಪು ಕೋಟೆ ಸೇರಿದಂತೆ ಆಯಕಟ್ಟಿನ ಸ್ಥಳಗಳ ಫೋಟೋಗಳನ್ನು ಪಾಕಿಸ್ತಾನಿ ಪ್ರಜೆಗಳೊಂದಿಗೆ ಹಂಚಿಕೊಳ್ಳುತ್ತಿದ್ದನೆಂದು ತಿಳಿದುಬಂದಿದೆ.

ಇದಲ್ಲದೆ, ಆತ ಕೆಲವು ವಾಟ್ಸಾಪ್ ಗುಂಪುಗಳಲ್ಲಿ ಸಕ್ರಿಯನಾಗಿದ್ದ, ಅಲ್ಲಿ ಪ್ರಸಿದ್ಧ ಉಗ್ರಗಾಮಿ ವ್ಯಕ್ತಿ ತೆಹ್ರೀಕ್-ಇ-ಲಬ್ಬೈಕ್ ನಾಯಕ ಮೌಲಾನಾ ಸಾದ್ ರಿಜ್ವಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದ.
ವಾರಾಣಸಿಯಲ್ಲಿ ಸ್ಥಳೀಯರು ಮತ್ತು ಪಾಕಿಸ್ತಾನಿ ನೆಟ್‌ವರ್ಕ್‌ಗಳ ನಡುವೆ ಸಂಪರ್ಕ ಕಲ್ಪಿಸುವ ವಾಟ್ಸಾಪ್ ಗ್ರೂಪ್ ಲಿಂಕ್‌ಗಳನ್ನು ಪ್ರಸಾರ ಮಾಡುವಲ್ಲಿ ಆಪಾದಿತ ಗೂಢಚಾರ ಭಾಗಿಯಾಗಿದ್ದಾನೆ ಎಂದು ಹೇಳಲಾಗಿದೆ. ನಫೀಸಾ ಎಂಬ ಪಾಕಿಸ್ತಾನಿ ಮಹಿಳೆಯ ಸಂಪರ್ಕದಲ್ಲೂ ಆತ ಇದ್ದ, ಆಕೆಯ ಪತಿ ಪಾಕಿಸ್ತಾನಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ವರದಿಯಾಗಿದೆ. ತುಫೈಲ್ ಸುಮಾರು 600 ಪಾಕಿಸ್ತಾನಿಗಳೊಂದಿಗೆ ಸಂಪರ್ಕದಲ್ಲಿದ್ದ ಎಂದು ನಂಬಲಾಗಿದೆ.
ಉತ್ತರ ಪ್ರದೇಶ ಎಟಿಎಸ್ ಪ್ರಸ್ತುತ ತುಫೈಲ್‌ನ ಚಟುವಟಿಕೆಗಳು ಮತ್ತು ನೆಟ್‌ವರ್ಕ್‌ನ ಸಂಪೂರ್ಣ ವ್ಯಾಪ್ತಿಯನ್ನು ತನಿಖೆ ಮಾಡುತ್ತಿದೆ.

ಪ್ರಮುಖ ಸುದ್ದಿ :-   ವಕ್ಫ್ ತಿದ್ದುಪಡಿ ಕಾಯಿದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement