ಅಂಕೋಲಾ: ಶಾಲೆಯ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ನಿರ್ಮಲ ಹೃದಯ ಆಂಗ್ಲ ಮಾಧ್ಯಮ ಶಾಲೆಯ 4 ತರಗತಿ ಕೊಠಡಿಯ ಮೇಲ್ಛಾವಣಿಯ ತಳಬಾಗದ ಕಾಂಕ್ರೀಟ್ ಪದರು ಕುಸಿದು ಬಿದ್ದು ನಾಲ್ಕೈದು ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ 12:30ರ ಸಮಯಕ್ಕೆ ಊಟದ ವಿರಾಮ ಇದ್ದ ಸಮಯದಲ್ಲಿ ವಿದ್ಯಾರ್ಥಿಗಳು ತರಗತಿ ಒಳಗಡೆ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೇಲ್ಛಾವಣಿಯ ತಳಬಾಗದ ಕಾಂಕ್ರೀಟ್ ಪದರು ಕುಸಿದು ಕೆಳಗೆ ಬಿದ್ದು ವಿದ್ಯಾರ್ಥಿಗಳು ಕುಳಿತುಕೊಳ್ಳುವ ಡೆಸ್ಕ್ ಸೇರಿದಂತೆ ತರಗತಿ ಒಳಗಡೆ ಬಿದ್ದಿದೆ.

ತಕ್ಷಣ ಗಾಯಗೊಂಡ ಮಕ್ಕಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.
ತರಗತಿಯಲ್ಲಿ 66 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಬಹುಪಾಲು ವಿದ್ಯಾರ್ಥಿಗಳು ತರಗತಿಯ ಹೊರಗೆ ಇದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಪೋಲಿಸರು, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೂಡ ಆಸ್ಪತ್ರೆಗೆ ತೆರಳಿ ಮಕ್ಕಳ ಆರೋಗ್ಯ ವಿಚಾರಿಸಿದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement