ವೀಡಿಯೊ…| ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ಒಂದರ ಮೇಲೆ ಏರಿ ನಿಂತ ಮತ್ತೊಂದು ಕಾರು…!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಸಿನಿಮೀಯ ರೀತಿಯಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕ ಬ್ಯಾರಿಕೇಡ್ ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ. ಈ ಘಟನೆ ಸಿನಿಮೀಯವಾಗಿದ್ದು, ಮುಂದೆ ನಿಂತಿದ್ದ ಕಾರಿನ ಕೆಳಗೆ ಹಿಂದಿನಿಂದ ಬಂದ ಕಾರು ನುಗ್ಗಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾಹಿತಿ ಸಿಕ್ಕಿದ ನಂತರ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಕಾರುಗಳನ್ನ ತೆರವು ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement