ಹೊನ್ನಾವರ: ಖರ್ವಾ ಬಳಿ ಟೆಂಪೊ ಪಲ್ಟಿ- ಓರ್ವ ಸಾವು, 12ಕ್ಕೂ ಹೆಚ್ಚು ಜನರಿಗೆ ಗಾಯ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ಸಮೀಪದ ತಿರುವಿನಲ್ಲಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಇತರ 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಟೆಂಪೋ ಪಲ್ಟಿಯಾಗಿದೆ.

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಜಲವಳ್ಳಕರ್ಕಿಯ ಹನುಂಮತ ಪೂಜಾರಿ ಎಂಬವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹೇಶ ನಾಯ್ಕ ಎಂಬವರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತರ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement