ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಕಾವೇರಿ ನಿರ್ವಹಣಾ ಪ್ರಾಧಿಕಾರ

ನವದೆಹಲಿ:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 13ನೇ ಸಭೆ ದೆಹಲಿಯ ಸೇವಾ ಭವನದಲ್ಲಿ ನಡೆಯುತ್ತಿದ್ದು, ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ಮೇಕೆದಾಟು DPR ಬಗ್ಗೆ ಪ್ರಸ್ತಾಪಿಸಲು ಕರ್ನಾಟಕ ಮುಂದಾದಾಗ ತಕರಾರು ತೆಗೆದ ತಮಿಳುನಾಡು, ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಹೀಗಾಗಿ ಚರ್ಚೆಗೆ ಅವಕಾಶ ನೀಡಬಾರದು ಎಂದು ಕಾವೇರಿ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತಿಳಿಸಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 13ನೇ ಸಭೆ ದೆಹಲಿಯ ಸೇವಾ ಭವನದಲ್ಲಿ ನಡೆಯುತ್ತಿದ್ದು, ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ನೇತೃತ್ವದಲ್ಲಿ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಬಾಕಿ ನೀರು ಬಿಡುಗಡೆಗೆ ತಮಿಳುನಾಡು ಬೇಡಿಕೆ ಇಟ್ಟಿದೆ. ಈವರೆಗೂ ಕರ್ನಾಟಕ 86.38 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ತಮಿಳುನಾಡಿಗೆ 55.78 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 30.06 ಟಿಎಂಸಿ ನೀರು ಹರಿಸಬೇಕೆಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಬೇಡಿಕೆಯಿಟ್ಟಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕಾವೇರಿ ನದಿಯಿಂದ ಆರರಿಂದ 7 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಆದರೆ ಕರ್ನಾಟಕ ಸರ್ಕಾರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾವೇರಿ ಜಲಾನಯನದಿಂದ ಸದ್ಯಕ್ಕೆ ತಮಿಳುನಾಡಿಗೆ ಹರಿಸಲು ಸಾಧ್ಯವೇ ಇಲ್ಲ. ಕಾವೇರಿ ಜಲಾಶಯಗಳಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜಲಾಶಯಗಳಲ್ಲಿ ನೀರಿನ ಸಂಗ್ರಹಣೆಯಾಗಿಲ್ಲ ಎಂದು ಹೇಳಿದೆ. ಮೇಕುದಾಟು ವಿಷಯ ಚರ್ಚೆಗೆ ಬಂದಾಗ ಸಭೆ ಅರ್ಧಕ್ಕೇ ಮೊಟಕಾಯಿತು.
ನವದೆಹಲಿಯಲ್ಲಿ ಇಂದು (ಮಂಗಳವಾರ) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದರ್ ಅಧ್ಯಕ್ಷತೆಯಲ್ಲಿ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಸೇರಿದಂತೆ ಕಾವೇರಿ ನದಿಪಾತ್ರ ರಾಜ್ಯಗಳ ಸಭೆ ನೆಯಿತು ಸೆಪ್ಟೆಂಬರ್ ತಿಂಗಳಿನಲ್ಲಿ ಬಾಕಿ ಇರುವ 6ರಿಂದ 7 ಟಿಎಂಸಿ ನೀರು ತಮಿಳುನಾಡಿಗೆ ಹರಿಸಬೇಕೆಂದು ಸಭೆ ಸೂಚಿಸಿತು.
ಜೂನ್-ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ತಮಿಳುನಾಡಿಗೆ 27 ಟಿಎಂಸಿ ನೀರನ್ನು ಕಾವೇರಿ ನದಿಯಿಂದ ಹರಿಸಬೇಕಿತ್ತು. ಸದ್ಯ 6ರಿಂದ 7 ಟಿಎಂಸಿ ಮಾತ್ರ ನೀರು ಹರಿಸಬೇಕು. ಮುಂದಿನ ಪರಿಸ್ಥಿತಿ ನೋಡಿಕೊಂಡು ಬಾಕಿ ಇರುವ ನೀರನ್ನು ಹಂತ ಹಂತವಾಗಿ ಹರಿಸಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ. ಕರ್ನಾಟಕ ಬಾಕಿ ಉಳಿಸಿಕೊಂಡಿರುವುದರಿಂದ ಬಿಡಬೇಕು. ನಾವು 27 ಟಿಎಂಸಿ ನೀರನ್ನು ಬಿಡುವಂತೆ ನಿರ್ದೇಶನ ಕೊಟ್ಟಿಲ್ಲ.ಆಯಾ ತಿಂಗಳಿನಲ್ಲಿ ಬಿಡಬೇಕಿದ್ದ ನೀರನ್ನು ಹರಿಸುವಂತೆ ಸೂಚಿಸಿದ್ದೇವೆ. ಪ್ರಾಧಿಕಾರದ ತೀರ್ಮಾನವನ್ನು ಎಲ್ಲರೂ ಪಾಲಿಸಬೇಕೆಂದು ಹಲ್ದರ್ ಹೇಳಿದರು.
ವಆದರೆ ಪ್ರಾಧಿಕಾರದ ಸೂಚನೆಯನ್ನು ತಿರಸ್ಕರಿಸಿರುವ ಕರ್ನಾಟಕ ಸರ್ಕಾರ ಸದ್ಯಕ್ಕೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿದೆ. ವಾಡಿಕೆಗಿಂತ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಜಲಾಶಯದಲ್ಲಿ ನೀರಿಲ್ಲ. ಹೀಗಾಗಿ ಇಂಥ ಪರಿಸ್ಥಿತಿಯಲ್ಲಿ ನೀರು ಹೇಗೆ ಬಿಡಬೇಕು ಎಂದು ಅಧಿಕಾರಿಗಳು ಪ್ರಶ್ನಿಸಿದರು.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸಬೇಕು. ತಮಿಳುನಾಡು ತನ್ನ ಬೆಳೆಗಳಿಗೆ ನೀರನ್ನು ಕೇಳುತ್ತಿದೆ. ನಮ್ಮಲ್ಲೇ ನೀರು ಇಲ್ಲದಿರುವಾಗ ಪ್ರಾಧಿಕಾರದ ಸೂಚನೆಯನ್ನು ಪಾಲನೆ ಮಾಡುವುದು ಕಷ್ಟ ಎಂದು ಅಧಿಕಾರಿಗಳು ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸಭೆ ಅರ್ಧಕ್ಕೆ ಮೊಟಕು:
ಮೇಕೆದಾಟು ಯೋಜನೆ ಬಗ್ಗೆ ಕರ್ನಾಟಕ ಸರ್ಕಾರ ಪ್ರಸ್ತಾಪಿಸಿದ್ದಕ್ಕೆ ತಮಿಳುನಾಡು ಮತ್ತು ಪಾಂಡಿಚೇರಿ ಸರ್ಕಾರಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ನಮ್ಮ ಅನುಮತಿ ಇಲ್ಲದೆ ಯೋಜನೆ ಕಾಮಗಾರಿ ಆರಂಭಿಸಲು ಅನುಮತಿ ನೀಡಬಾರದೆಂದು ಪಟ್ಟು ಹಿಡಿದರು. ಇದು ಕುಡಿಯುವ ನೀರಿನ ಯೋಜನೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡಿದರು.
ಮೇಕೆದಾಟು ಯೋಜನೆಯನ್ನು ಕಾವೇರಿ ನದಿನೀರು ಪ್ರಾಧಿಕಾರದ ಒಪ್ಪಿಗೆ ಇಲ್ಲದೆ ನಿರ್ಮಿಸಬಾರದೆಂದು ಸರ್ಕಾರಕ್ಕೆ ಸೂಚನೆ ನೀಡಲಾಯಿತು. ಹೀಗಾಗಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement