ಮಂಗನ ಕಾಯಿಲೆಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬ ಮಹಿಳೆ ಸಾವು

ಕಾರವಾರ : ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡನೇ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಜ್ವರ ತೀವ್ರವಾದ ಕಾರಣ ಮೂರು ದಿನಗಳ ಹಿಂದೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಸಾವಾಗಿದ್ದು, ಐದು ದಿನಗಳ ಹಿಂದೆ ಸಿದ್ದಾಪುರ ತಾಲೂಕಿನ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು. ಸಿದ್ದಾಪುರ ತಾಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಹಿಳೆಯರು ಈ ರೋಗದಿಂದ ಮೃತಪಟ್ಟಂತಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಯಿಂದ 43 ಮಂದಿ ಬಳಲುತ್ತಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement