ಸಿಎಂ ಬದಲಾವಣೆ ಡ್ರಾಮಾಕ್ಕೆ ಟ್ವಿಸ್ಟ್: ಬಿಎಸ್‌ವೈ ಹಾಡಿಹೊಗಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ..!

ಪಣಜಿ: ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಬಿ.ಎಸ್‌. ಯಡಿಯೂರಪ್ಪ ಮತ್ತೆ ಕೆಲಕಾಲ ಮುಂದುವರಿಯಲಿದ್ದಾರೆಯೇ..?
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಪಟ್ಟಂತೆ ಭಾನುವಾರ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ
ರಾಜಕೀಯ ಅಸ್ಥಿರತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, “ಹಾಗೆ ನಿಮಗೆ ಅನಿಸುತ್ತಿದೆ. ಆದರೆ ನಮಗೆ ಅನಿಸುತ್ತಿಲ್ಲ ಎಂದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಈ ಅಚ್ಚರಿಯ ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಯಡಿಯೂರಪ್ಪ ಪರವಾಗಿ ಮೇಲ್ನೋಟಕ್ಕೆ ಬ್ಯಾಟ್‌ ಬೀಸಿದ್ದಾರೆ. ಆದರೆ ಒಳಗಿನ ಮರ್ಮ ಏನಿದೆಯೋ ಗೊತ್ತಿಲ್ಲ.
ಇಂದು (ಭಾನುವಾರ) ಸಂಜೆಯೊಳಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬದಲಾವಣೆ ಸೂಚನೆ ಬಿಜೆಪಿ ಹೈಕಮಾಂಡಿನಿಂದ ಬರಲಿದೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಈ ಹೇಳಿಕೆ ಬಂದಿದೆ. ಜೊತೆಗೆ ಮುಖ್ಯಮಮತ್ರಿ ಯಡಿಯೂರಪ್ಪ ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹೀಗಾಗಿ ಮತ್ತೆ ಕೆಲಕಅಲ ಯಡಿಯೂರಪ್ಪ ಮತ್ತೆ ಕೆಲಕಾಲ ಮುಂದುವರಿಯುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆ ಎದ್ದಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement