ಚಿಕ್ಕಮಗಳೂರು : ದತ್ತ ಜಂತಿಗೂ ಮುನ್ನವೇ ದತ್ತಪೀಠಕ್ಕೆ ಇಬ್ಬರು ‘ಹಿಂದೂ ಅರ್ಚಕ’ರ ನೇಮಕ ಮಾಡಿದ ರಾಜ್ಯ ಸರ್ಕಾರ

ಚಿಕ್ಕಮಗಳೂರು : ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ ಎಂಬ ಇಬ್ಬರು ಅರ್ಚಕರನ್ನು ನೇಮಕ ಮಾಡಿದೆ.
ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿದಂತೆ ಒಟ್ಟು 8 ಜನರಿದ್ದಾರೆ. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.

ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ದತ್ತ ಜಯಂತಿ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ.
ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸಬೇಕು ಎಂದು ಮೂರ್ನಾಲ್ಕು ದಶಕಗಳಿಂದಲೂ ಹಿಂದೂ ಸಂಘಟನೆಗಳು ಹೋರಾಟ ನಡೆಸುತ್ತ ಬಂದಿದ್ದವು. ಇಂದು, ಶನಿವಾರ ರಾಜ್ಯ ಸರ್ಕಾರವು ದತ್ತಜಯಂತಿಗೆ ಹಿಂದೂ ಅರ್ಚಕರ ನೇಮಕ ಮಾಡಿದೆ. ಹಿಂದೂ ಅರ್ಚಕರ ನೇಮಕದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ‌ ಸಂಭ್ರಮಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement