ನಾನೆಲ್ಲೂ ಓಡಿ ಹೋಗಿಲ್ಲ, ನನ್ನ – ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ

ಬೆಂಗಳೂರು: ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು, ಇದು ರಾಜಕೀಯ ಪ್ರೇರಿತ ಆರೋಪ. ಇಂಥ ಆರೋಪಗಳು ದೇವೇಗೌಡರ ಕುಟುಂಬಕ್ಕೆ ಹೊಸದೇನಲ್ಲ,ಇದನ್ನು ಕಾನೂನಿನ ಪ್ರಕಾರ ಎದುರಿಸುತ್ತೇವೆ ಎಂದು ಸೋಮವಾರ ಹೇಳಿದ್ದಾರೆ.
ನಗರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಹಾಗೂ ಪುತ್ರ ಪ್ರಜ್ವಲ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ರಾಜ್ಯ ಸರ್ಕಾರ ತನಿಖೆ ಮಾಡಲಿ. ಕಾನೂನಿನ ಪ್ರಕಾರ ಏನಿದೆಯೋ ಹಾಗೆ ಆಗಲಿ ಎಂದರು.

ಮಗ ಪ್ರಜ್ವಲ್ ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಎಲ್ಲಿಯೂ ಓಡಿ ಹೋಗಿಲ್ಲ. ಪ್ರಜ್ವಲ್‌ ಎಲ್ಲಿಯೂ ಓಡಿ ಹೋಗಿಲ್ಲ. ವಿಚಾರಣೆಗೆ ಕರೆದರೆ ಬರುತ್ತೇವೆ.ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದಾನೆ. ತನಿಖೆಗೆ ಕರೆದಾಗ ಬರುತ್ತಾನೆ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.
ದೇವೇಗೌಡರ ಕುಟುಂಬದ ವಿರುದ್ಧ ಆರೋಪಗಳು ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ. ದೇವೇಗೌಡರ ಕುಟುಂಬ ಮೇಲೆ ಲೋಕಾಯುಕ್ತ, ಸಿಐಡಿ ತನಿಖೆ ಇವೆಲ್ಲವನ್ನೂ ಎದುರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವಾರ ಚುನಾವಣೆಗೆ ಮುನ್ನ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪುತ ವಿಡಿಯೋಗಳಿದ್ದ ಪೆನ್ ಡ್ರೈವ್ ಬೆಳಕಿಗೆ ಬಂದಿತ್ತು. ಎಚ್ ಡಿ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement