ಕರ್ನಾಟಕದಲ್ಲಿ ಲಾಕ್‌ಡೌನ್‌ ವಿಸ್ತರಣೆ ಸುಳಿವು ನೀಡಿದ ಸಚಿವ ಅಶೋಕ ಹೇಳಿಕೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಹೀಗಾಗಿ ಲಾಕ್ ಡೌನ್ ಮುಂದುವರಿಸಿದರೆ ಮತ್ತಷ್ಟು ಅನುಕೂಲವಾಗುತ್ತದ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುವ ಸುಳಿವನ್ನು ಅವರು ಪರೋಕ್ಷವಾಗಿ ನೀಡಿದ್ದಾರೆ.
ಹೊಸಕೆರೆಹಳ್ಳಿಯಲ್ಲಿ ಬಿಬಿಎಂಪಿಯ ನೂತನ ಟ್ರಯಾಜ್ ಮತ್ತು ಕೋವಿಡ್ ಸ್ಥಿರೀಕರಣ ಘಟಕ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಈ ಬಗ್ಗೆ ಮನವರಿಕೆ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಆಗಬೇಕು. ಮುಖ್ಯಮಂತ್ರಿ ಅವರು ಈಗಿರುವ ಲಾಕ್ ಡೌನ್ ಮುಗಿಯುವ ಮುನ್ನ 3-4 ದಿನಗಳಲ್ಲಿ ಸಭೆ ಮಾಡಲಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಲಹೆ ನೀಡಲಾಗುವುದು. ಅಂತಿಮವಾಗಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ ಎಂದರು.
ಬೆಂಗಳೂರು ನಾಗರೀಕನಾಗಿ ಲಾಕ್ ಡೌನ್ ಮುಂದುವರಿಕೆ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಮಹಾರಾಷ್ಟ್ರ, ದೆಹಲಿ ಪ್ರಕರಣ ನಮ್ಮ ಮುಂದಿದೆ. ಅಲ್ಲಿ ಮೊದಲ ಅಲೆ ಬಂತು. ಅವರು ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ. ಅದನ್ನು ‌ನಾವು ಅನುಸರಿಸುವುದು ಉತ್ತಮ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement