ಮತ್ತೆ ಹೆಚ್ಚಳ.. ಕರ್ನಾಟಕದಲ್ಲಿ 1200 ದಾಟಿದ ದೈನಂದಿನ ಕೊರೊನಾ ಪ್ರಕರಣ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಮಂಗಳವಾರಕ್ಕಿಂತ ಬುಧವಾರ ಮತ್ತೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 1275 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ. ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಹೇಳಿದೆ.
ಬೆಂಗಳೂರಿನಲ್ಲಿ 786 ಮಂದಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,63,614ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಪ್ರಕಟಿಸಿದ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 1275 ಮಂದಿಗೆ ಸೋಂಕು ಧೃಡಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,220 ತಲುಪಿದೆ. ರಾಜ್ಯದಲ್ಲಿ 479 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 9,40,968. ಬೆಂಗಳೂರಿನಲ್ಲಿ 271 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,530ಕ್ಕೆ ತಲುಪಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement