ಸಹಪಾಠಿಗಳಿಂದ ರ‍್ಯಾಗಿಂಗ್‌ ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳು ವಿದ್ಯಾರ್ಥಿನಿಗೆ ರ‍್ಯಾಗಿಂಗ್ ಮಾಡಿದ್ದು, ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ಅದರಲ್ಲಿ ರ್ಯಾಗಿಂಗ್‌ ಮಾಡಿದವರ ಬಗ್ಗೆ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ.
ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement