ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಹಾಗೂ ಜೂನ್ 4ರ ನಂತರ ಕಾಂಗ್ರೆಸ್ ಕೂಡ ರಾಹುಲ್ ಗಾಂಧಿ ಬಣ ಮತ್ತು ಪ್ರಿಯಾಂಕಾ ಗಾಂಧಿ ಬಣವಾಗಿ ವಿಭಜನೆಯಾಗಬಹುದು ಎಂದು ಆಚಾರ್ಯ ಪ್ರಮೋದ ಕೃಷ್ಣಂ ಕೂಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. .
“ರಾಹುಲ್ ಗಾಂಧಿ ಅಮೇಥಿ ತೊರೆದ ರೀತಿಯಿಂದಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಸಿದಿದೆ. ಪ್ರಿಯಾಂಕಾ ಗಾಂಧಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ಈಗ ಅವರ ಬೆಂಬಲಿಗರ ಹೃದಯದಲ್ಲಿ ಜ್ವಾಲಾಮುಖಿಯ ಆಕಾರವನ್ನು ಪಡೆಯುತ್ತಿದೆ, ಅದು ಜೂನ್ 4 ರ ನಂತರ ಸ್ಫೋಟಗೊಳ್ಳಲಿದೆ ಎಂದು ಆಚಾರ್ಯ ಪ್ರಮೋದ ಕೃಷ್ಣಂ ಹೇಳಿದ್ದಾರೆ.”ಒಂದು ರಾಹುಲ್ ಗಾಂಧಿ ಬಣ ಮತ್ತು ಇನ್ನೊಂದು ಪ್ರಿಯಾಂಕಾ ಗಾಂಧಿ ಬಣ ಎಂದು ಕಾಂಗ್ರೆಸ್ ಮತ್ತೆ ಎರಡು ಬಣಗಳಾಗಿ ವಿಭಜನೆಯಾಗಲಿದೆ, ಎಂದು ಅವರು ಹೇಳಿದ್ದಾರೆ.
“ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಬಿಡುವುದಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೆ … ಪ್ರಿಯಾಂಕಾ ಗಾಂಧಿ ವಿರುದ್ಧ ಕುಟುಂಬ ಮತ್ತು ಪಕ್ಷದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ. ಕುಟುಂಬ ಮತ್ತು ಪಕ್ಷದಲ್ಲಿನ ಪಿತೂರಿಗೆ ಅವರು ಬಲಿಯಾಗಿದ್ದಾರೆ” ಎಂದು ಮಾಜಿ ಕಾಂಗ್ರೆಸ್ ಮುಖಂಡ ಹಾಗೂ ಪ್ರಿಯಾಂಕಾ ಗಾಂಧಿ ಆಪ್ತರಾಗಿದ್ದ ಆಚಾರ್ಯ ಪ್ರಮೋದ ಕೃಷ್ಣಂ ಹೇಳಿದ್ದಾರೆ.
“ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಬೇಕಿತ್ತು. ಪ್ರತಿದಿನ ಪ್ರಧಾನಿ ಮೋದಿಗೆ ಸವಾಲೆಸೆಯುವ ವ್ಯಕ್ತಿಯೊಬ್ಬರು ದೇಶದ ಜನರಿಗೆ ‘ಡರೋ ಮತ್’ (ಭಯಪಡಬೇಡಿ) ಎಂಬ ಸಂದೇಶವನ್ನು ನೀಡುವವರು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುವುದರ ಬದಲು ಪಲಾಯನ ಮಾಡುವುದರಿಂದ ಅವರೇ ಭಯಗೊಂಡಿದ್ದಾರೆ ಎಂಬ ಸಂದೇಶ ನೀಡುತ್ತದೆ. ಇದು ಕಾಂಗ್ರೆಸ್‌ಗೆ ದುರದೃಷ್ಟಕರ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸಲು ಬಯಸದಿದ್ದರೆ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಿಂದ ಸ್ಪರ್ಧಿಸಬೇಕಿತ್ತು ಎಂದು ಅವರು
ಪಾಕಿಸ್ತಾನದಲ್ಲಿ ರಾಹುಲ್ ಗಾಂಧಿ ಜನಪ್ರಿಯತೆ ಮತ್ತು ಬೇಡಿಕೆ ಹೆಚ್ಚುತ್ತಿರುವ ಕಾರಣ ರಾಹುಲ್ ಗಾಂಧಿ ರಾಯ್ಬರೇಲಿಯ ಬದಲಿಗೆ ರಾವಲ್ಪಿಂಡಿಯಿಂದ ಸ್ಪರ್ಧಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ