ಹಿಂದೂ ಎಂಬುದು ಪರ್ಷಿಯನ್‌ನ ಅಸಭ್ಯ ಪದ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಖಂಡನೆ

ಬೆಳಗಾವಿ: ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ ಹಾಗೂ ಈ ಪದಕ್ಕೆ ಅಸಭ್ಯ ಅರ್ಥಗಳಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆಯನ್ನು ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಹಿಂದೂ ಧರ್ಮವು ನಾಗರಿಕ ವಾಸ್ತವವಾಗಿದೆ. ಪ್ರತಿಯೊಂದು ಧರ್ಮ, ನಂಬಿಕೆಗಳನ್ನು ಗೌರವಿಸಲು ಕಾಂಗ್ರೆಸ್ ನಮ್ಮ ರಾಷ್ಟ್ರವನ್ನು ನಿರ್ಮಿಸಿತು. ಇದು ಭಾರತದ ಸಾರವಾಗಿದೆ. ಸತೀಶ್ ಜಾರಕಿಹೊಳಿ ಅವರ ಹೇಳಿಕೆ ದುರದೃಷ್ಟಕರ ಹಾಗೂ ನಾವು ಇದನ್ನು ತಿರಸ್ಕರಿಸುತ್ತೇವೆ. ಅವರು ಈ ರೀತಿಯಾದ ಹೇಳಿಕೆ ನೀಡಬಾರದು ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಅವರು ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದಕ್ಕೆ ಅಸಭ್ಯವಾದ ಅರ್ಥಗಳಿವೆ. ಅದನ್ನು ಗೂಗಲ್‌ನಲ್ಲಿ ಸರ್ಚ್‌ ಮಾಡಿದರೆ ಸಿಗುತ್ತದೆ. ಹಿಂದೂ ಪದದ ಅರ್ಥವನ್ನು ತಿಳಿದ ನಂತರ ನಾಚಿಕೆಪಡುತ್ತಾರೆ. ಅದರ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement