ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್ ಲೈಟ್ ಫೋನ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 17ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ ನಿಂದ ಕರೆ ಹೋಗಿದೆ ಎನ್ನಲಾಗಿದೆ. ಅನಾಮಧೇಯ ಸ್ಥಳಕ್ಕೆ ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಉಪಕರಣ ಮೂಲಕ ಕರೆ ಹೋಗಿರುವ ಬಗ್ಗೆ ಅರಿತು ಕೇಂದ್ರ ಸಂಸ್ಥೆಗಳು ಮಾಹಿತಿ ರವಾನಿಸಿವೆ. ಅಧಿಕಾರಿಗಳು ತಕ್ಷಣವೇ ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಗ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್ ಲೈಟ್ ಫೋನ್ ಮೂಲಕ ವಿದೇಶಕ್ಕೆ ಕರೆ ಹೋಗಿರುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ.
ಆದರೆ, ಯಾವ ನಿರ್ದಿಷ್ಟ ಸ್ಥಳಕ್ಕೆ ಕರೆ ಹೋಗಿದೆ ಎಂದು ಗೊತ್ತಾಗಿಲ್ಲ, ಆದರೆ ಪಾಕಿಸ್ತಾನಕ್ಕೆ ಹೋಗಿರುವುದು ಶಂಕೆ ವ್ಯಕ್ತವಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2021ರ ಏಪ್ರಿಲ್ ನಲ್ಲಿ ಯಾದಗಿರಿಗೆ ಸಮೀಪದ ಹೆಡಗಿಮುದ್ರಾ ಗ್ರಾಮ ಹೊರವಲಯದಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಹೋಗಿದ್ದರಿಂದ, ಆಂತರಿಕ ಭದ್ರತಾ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ