ಕನ್ನಡದ ಹಿರಿಯನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಲೋಹಿತಾಶ್ವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಕನ್ನಡ ಚಿತ್ರ ರಂಗದಲ್ಲಿ ವೀಭಿನ್ನ ರೀತಿಯ ಪಾತ್ರಗಳ ಮೂಲಕ ವಿಶೇಷವಾಗಿ ಪೋಷಕ ಪಾತ್ರಗಳ ಮೂಲಕ ಮನೆಮಾತಾಗಿರುವ ಲೋಹಿತತಾಶ್ವ ಅವರು, ಕನ್ನಡ ಚಲನಚಿತ್ರ ನಟ ಮತ್ತು ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿರುವ ಲೋಹಿತಾಶ್ವ ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು  ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮ  ಧ್ವನಿಗೆ ಜನಪ್ರಿಯರಾಗಿದ್ದಾರೆ. ಖಳನಟನಾಗಿ ಜನಪ್ರಿಯರಾಗಿರುವ ಶರತ್‌ ಲೋಹಿತಾಶ್ವ ಅವರ ತಂದೆಯವರಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement