ಜಿಮ್’ ತೆರೆಯಲೂ ಈಗ ರಾಜ್ಯ ಸರ್ಕಾರದಿಂದ ಷರತ್ತುಬದ್ಧ ಅನುಮತಿ

ಬೆಂಗಳೂರು : ಏಪ್ರಿಲ್ 7ರ ವರೆಗೆ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ಜಿಮ್ ಗಳಿಗೂ ಈಗ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಮ್ ಗಳಿಗೂ ಶೇ.50 ರಷ್ಟು ಅವಕಾಶ ನೀಡಬೇಕು ಎಂದು ರಾಜ್ಯ ಜಿಮ್ ಅಸೋಸಿಯೇಷನ್ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಬಿದ್ದಿದೆ.
ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಕೊರೊನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ. ಜಿಮ್ ಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಜಿಮ್ ಗಳಲ್ಲಿರುವ ಉಪಕರಣವನ್ನು ಪ್ರತಿನಿತ್ಯ ಸ್ಯಾನಿಟೈಸಿಂಗ್ ಮಾಡಬೇಕು, ದೈಹಿಕ ಅಂತರ ಕಾಪಾಡಬೇಕು ಎಂದು ಸೂಚಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಏಪ್ರಿಲ್ 2 ರಂದು ಹೊಸ ಮಾರ್ಗಸೂಚಿ ಪ್ರಕಟ ಮಾಡಿತ್ತು, ಅದರಂತೆ ಜಿಮ್, ಸ್ವಿಮ್ಮಿಂಗ್ ಪೂಲ್ ಗಳನ್ನು ತೆರೆಯದಂತೆ ಆದೇಶ ಹೊರಡಿಸಿತ್ತು.. ಇದೀಗ ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement