ಬೆಳಗಾವಿ : ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹1.10 ಕೋಟಿ ವಶಕ್ಕೆ

ಬೆಳಗಾವಿ: ಗ್ರಾಮ‌ ಲೆಕ್ಕಾಧಿಕಾರಿ ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 1.10 ಕೋಟಿ ರೂ. ಹಣವನ್ನು ರಾಮದುರ್ಗ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಚಿಕ್ಕೋಡಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠ್ಠಲ ಎಂಬವರು ಸಾಗಿಸುತ್ತಿದ್ದ 1.10 ಕೋಟಿ ರೂ.‌ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠ್ಠಲ ತಮ್ಮ ಕಾರಿನಲ್ಲಿ ಈ ಹಣ ಸಾಗಿಸುತ್ತಿದ್ದರು. ರಾಮದುರ್ಗ ಮಾರ್ಗವಾಗಿ ಬಾಗಲಕೋಟೆ ಕಡೆಗೆ ಹಣ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಾರು ಪರಿಶೀಲನೆ ಮಾಡಿದ ಪೊಲೀಸರಿಗೆ ₹1,10,62,900 ನಗದು ಸಿಕ್ಕಿದೆ.
ಮುಂದಿನ ಕ್ರಮಕ್ಕೆ ಆದಾಯ ತೆರಿಗೆ ಇಲಾಖೆ‌ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರಿಸಲಾಗಿದೆ.

 

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement